ಹುಣಸೂರು: ಹುಡಾ(ಹುಣಸೂರು ನಗರ ಅಭಿವೃದ್ಧಿ ಪ್ರಾಧಿಕಾರ)ದ ನೂತನ ಅಧ್ಯಕ್ಷರಾಗಿ ಎಚ್.ಪಿ.ಅಮರ್‌ನಾಥ್ ಅಧಿಕಾರ ಸ್ವೀಕರಿಸಿದರು.
ಬಳಿಕ ಮಾತನಾಡಿದ ಅವರು, ತಮ್ಮ ಆಡಳಿತ ಅವಧಿಯಲ್ಲಿ ಪಾರದರ್ಶಕ ಆಡಳಿತ ನೀಡುವೆ, ಪ್ರಾಧಿಕಾರದಲ್ಲಿ ನಡೆಯುವ ಎಲ್ಲಾ ವ್ಯವಹಾರಗಳು ಸಾರ್ವಜನಿಕರಿಗೂ ತಿಳಿಯಬೇಕೆಂಬ ಉದ್ದೇಶದಿಂದ ಹುಡಾ ವೆಬ್‌ಸೈಟ್ ಆರಂಬಿಸಲಾಗುವುದು ಎಂದು ಹೇಳಿದರು.
ಹುಡಾ ಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ನಗರದಲ್ಲಿ ನೂರಾಕ್ಕೂ ಹೆಚ್ಚು ಸಿ ಎ ಸೈಟ್ ಗಳಿದ್ದು ಬೇಡಿಕೆ ಆಧರಿಸಿ ಆದ್ಯತೆ ಮೇರೆಗೆ ಸಂಘ ಸಂಸ್ಥೆಗಳಿಗೆ ನೀಡಲು ಕ್ರಮ ವಹಿಸಲಾಗುವುದು. ಅನಧಿಕೃತ ಬಡಾವಣೆಗಳನ್ನು ಸರ್ಕಾರದ ನಿರ್ದೇಶನದ ಮೇರೆಗೆ ಎ ಖಾತಾ ಮತ್ತು ಬಿ ಖಾತಾ ಯೋಜನೆಯು ಈ ವಾರದೊಳಗೆ ಜಾರಿಗೊಳಿಸುವೆ ಎಂದು ಭರವಸೆ ನೀಡಿದರು.
ನಗರದ 84 ಅನಧಿಕೃತ ಬಡಾವಣೆಗಳ ಸಮಸ್ಯೆಯನ್ನು ಬಗೆಹರಿಸಲು ಶಾಸಕರು ಹಾಗೂ ನಗರ ಸಭೆ ಆಡಳಿತ ಮಂಡಳಿಯವರೊಂದಿಗೆ ಕೈಜೋಡಿಸಿ ಹುಣಸೂರು ನಗರವನ್ನು ಅಭಿವೃದ್ಧಿ ಪಡಿಸಲು ಶ್ರಮಿಸಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ತನ್ನನ್ನು ಹುಡಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಸಿಎಂ ಸಿದ್ದ ರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರುಗಳಾದ ಸತೀಸ್ ಜಾರಕಿಹೋಳಿ, ಭೈರತಿ ಸುರೇಶ್, ಡಾ ಎಚ್ ಸಿ ಮಹದೇವಪ್ಪ, ಕೆ ವೆಂಕಟೇಶ್, ಮಾಜಿ ಶಾಸಕರಾದ ಎಚ್ ಪಿ ಮಂಜುನಾಥ್ ಗೆ ಅಭಿನಂದನೆ ತಿಳಿಸಿದರು.
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…
ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…
ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…
ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…
ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…
ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…