ಹುಣಸೂರು : ತಾಲೂಕಿನ ಸರಕಾರಿ ಶಾಲೆಯಲ್ಲಿ ಬಾಲಕಿಯೊಂದಿಗೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರು, ಮಹಿಳೆಯರು ಹಿಡಿದು ಗೂಸಾ ನೀಡಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.
ತಾಲೂಕಿನ ದೊಡ್ಡಹೆಜ್ಜೂರಿನ ವಿವಾಹಿತ ರವಿ(೪೨) ಎಂಬಾತನೇ ಬಂಧಿತ ಆರೋಪಿ. ಈತ ಇದೇ ಶಾಲೆಯಲ್ಲಿ ಹಿಂದೆ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ, ಕೆಲಸ ಬಿಟ್ಟ ನಂತರ ಗ್ರಾಮದಲ್ಲೇ ಗ್ರಾಮ-ಒನ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಶನಿವಾರ ಮದ್ಯಾಹ್ನದ ನಂತರ ೯ನೇ ತರಗತಿಯ ವಿದ್ಯಾರ್ಥಿನಿಯನ್ನು ಹಿರಿಯ ಪ್ರಾಥಮಿಕ ಶಾಲೆಗೆ ಕರೆಸಿಕೊಂಡು ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದಾಗಲೇ ಬಾಲಕಿಯ ಸಹೋದರ ಹಾಗೂ ಗ್ರಾಮಸ್ಥರು ಪತ್ತೆ ಹಚ್ಚಿ, ಗೂಸಾ ನೀಡಿ ಪೊಲೀಸರಿಗೆ ಮಾಹಿತಿ ನೀಡಿದ ಮೇಗೆರೆ ಇನ್ಸ್ಪೆಕ್ಟರ್ ಮುನಿಸ್ವಾಮಿ ವಶಕ್ಕೆ ಪಡೆದರು.
ಈ ಸಂಬಂಧ ಬಾಲಕಿಯ ತಾಯಿ ಹಾಗೂ ಬಿಇಒ ಅವರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ. ಶಾಲೆಗೆ ಪೊಲೀಸ್ ಇನ್ಸ್ಪೆಕ್ಟರ್ ಮುನಿಸ್ವಾಮಿ, ಬಿಇಒ ಮಹದೇವ್ ಎಸ್.ಪಿ. ಹಾಗೂ ಸಿ.ಆರ್.ಪಿ, ಬಿಆರ್‌ಪಿಗಳು ಭೇಟಿ ನೀಡಿದ್ದರು.
ಮುಖ್ಯ ಶಿಕ್ಷಕನ ವಿರುದ್ದ ದೂರು:
ಶಾಲೆಯ ಬೀಗದ ಕೀ ರವಿ ಬಳಿ ಹೇಗೆ ಹೋಯಿತು. ಇಲ್ಲಿ ಮುಖ್ಯ ಶಿಕ್ಷಕ ಬಿ.ಎಂ.ಸತೀಶ್‌ಕುಮಾರ್‌ರ ಕರ್ತವ್ಯ ನಿರ್ಲಕ್ಷವಿದ್ದು, ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲಾ, ಹೀಗಾಗಿ ಮುಖ್ಯ ಶಿಕ್ಷಕರ ಬೇಜವಾಬ್ದಾರಿತನ ಹಾಗೂ ಅವರು ತಲೆಮರೆಸಿಕೊಂಡಿರುವ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಬಿಇಒ ಮಹದೇವ್ ಎಸ್.ಪಿ ತಿಳಿಸಿದ್ದಾರೆ.
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…