ಮೈಸೂರು

ಹುಣಸೂರು | ಹೆಚ್ಚಿದ ಹುಲಿ ಉಪಟಳ : ರೈತರಿಂದ ಅಂತರರಾಜ್ಯ ಹೆದ್ದಾರಿ ಬಂದ್‌ ; ರೈತರ ಆಕ್ರೋಶ

ಹುಣಸೂರು : ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಲವು ಗ್ರಾಮಗಳಲ್ಲಿ ನಡೆಯುತ್ತಿರುವ ನಿರಂತರ ಹುಲಿ ದಾಳಿಗಳ ಹಿನ್ನೆಲೆಯಲ್ಲಿ ರೈತರು ಅಂತರರಾಜ್ಯ ಕೇರಳ ಹೆದ್ದಾರಿಯನ್ನು ಬಂದ್ ಮಾಡಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ.

ಮುತ್ತುರಾಯನಹೊಸಹಳ್ಳಿ, ಕಲ್ಲಹಳ್ಳಿ, ಹೈರಿಗೆ, ತಟ್ಟೆಕೆರೆ, ಹೆಮ್ಮಿಗೆ ಹಾಗೂ ಬೀರನಹಳ್ಳಿ ಸುತ್ತಮುತ್ತಲಿನ ಗ್ರಾಮಗಳ ರೈತರು ದೊಡ್ಡ ಸಂಖ್ಯೆಯಲ್ಲಿ ಹೆದ್ದಾರಿಗಳಲ್ಲಿ ಇಂದು ಟೈರ್‌ಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಕೇರಳ ಹೆದ್ದಾರಿ ಹಲವು ಗಂಟೆಗಳ ಕಾಲ ಬಂದ್ ಆಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು.

ಇದನ್ನು ಓದಿ: ಭಾಷೆ ಬೇರೆಯಾದರೂ, ದೇಶವೊಂದೇ ಭಾರತ

ರೈತರ ಆರೋಪ ಪ್ರಕಾರ, ಕಳೆದ ಒಂದು ವರ್ಷದಿಂದ ಈ ಪ್ರದೇಶದಲ್ಲಿ ಹುಲಿ ದಾಳಿಗಳು ನಿರಂತರವಾಗಿದ್ದು, ಐವತ್ತಕ್ಕೂ ಹೆಚ್ಚು ಜಾನುವಾರುಗಳು ಬಲಿಯಾಗಿವೆ. ಹಗಲೆಲ್ಲೇ ಹುಲಿಗಳು ಗ್ರಾಮಗಳಲ್ಲಿ ತಿರುಗಾಡುತ್ತಿದ್ದು, ಜಾನುವಾರುಗಳನ್ನು ಮೇಯಿಸಲು ಬಿಡುವುದು ಅಪಾಯವಾಗಿದೆ ಎನ್ನಲಾಗಿದೆ.

ಇದೀಗ ಜೋಳ ಸೇರಿದಂತೆ ಧಾನ್ಯಗಳ ಕಟಾವು ಸಮಯವಾಗಿದ್ದು, ಕೂಲಿ ಕಾರ್ಮಿಕರು ಕೆಲಸಕ್ಕೆ ಬರಲು ಹೆದರಿರುವುದು, ರೈತರ ಕೆಲಸಕ್ಕೆ ಅಡಚಣೆ ಉಂಟುಮಾಡಿದೆ. ಶಾಲಾ–ಕಾಲೇಜು ವಿದ್ಯಾರ್ಥಿಗಳನ್ನೂ ಸುರಕ್ಷಿತವಾಗಿ ವಾಪಸ್ಸು ಬರುವವರೆಗೆ ಕಾಯಬೇಕಿರುವ ಪರಿಸ್ಥಿತಿ ಗ್ರಾಮಗಳಲ್ಲಿ ನಿರ್ಮಾಣವಾಗಿದೆ ಎಂದು ರೈತರು ಅರಣ್ಯ ಇಲಾಖೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಇದೆ ವೇಳೆ ಮಾನವ–ಜಾನುವಾರುಗಳ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಬೇಕು
ಎಂದು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

1 hour ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

2 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

3 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

8 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

15 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

15 hours ago