ಮೈಸೂರು

ಹುಣಸೂರು ಚಿನ್ನಾಭರಣ ದರೋಡೆ ಪ್ರಕರಣ : ತನಿಖೆ ಕುರಿತು ಎಸ್ಪಿ ವಿಷ್ಣುವರ್ಧನ್ ಹೇಳಿದ್ದೇನು?

ಹುಣಸೂರು : ಸದಾ ಜನನಿಬಿಡ ಪ್ರದೇಶವಾದ ಹುಣಸೂರು ಬಸ್‌ ನಿಲ್ದಾಣ ಹಿಂಭಾಗದ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಜ್ಯುಯಲರಿ ಅಂಗಡಿಯಲ್ಲಿ ಭಾನುವಾರ ಮಟ ಮಟ ಮಧ್ಯಾಹ್ನವೇ ನಡೆದ ಚಿನ್ನಾಭರಣ ದರೋಡೆ ಪ್ರಕರಣ ಹುಣಸೂರು ಜನತೆಯನ್ನು ಬೆಚ್ಚಿ ಬೀಳಿಸಿದೆ. ಸದ್ಯ ಘಟನೆ ಸಂಬಂಧ ಪೊಲೀಸರು ಎಲ್ಲಾ ರೀತಿಯಲ್ಲೂ ತನಿಖೆ ನಡೆಸುತ್ತಿದ್ದಾರೆ.

ಈ ಇನ್ನೂ ತನಿಖೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಷ್ಣುವರ್ಧನ್, ಸಿಸಿಟಿವಿ ದೃಶ್ಯಾವಳಿ ಆಧರಿಸಿ ದರೋಡೆಕೋರರ ಚಹರೆಗಳನ್ನು ಗುರುತಿಸಲಾಗಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ ಸುಮಾರು 7 ಕೆ.ಜಿ. ಚಿನ್ನಾಭರಣ ದರೋಡೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅಂಗಡಿ ಮಾಲೀಕರ ಪಾತ್ರ ಸೇರಿದಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಘಟನೆ ನಡೆದು ಈಗಾಗಲೇ 24 ಗಂಟೆಗಳಾಗಿದ್ದು, ತನಿಖೆ ಚುರುಕಾಗಿ ಸಾಗುತ್ತಿದೆ. ಆರೋಪಿಗಳ ಬಂಧನಕ್ಕಾಗಿ ಐದು ಇನ್ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ವಿವಿಧ ದಿಕ್ಕುಗಳಲ್ಲಿ ತನಿಖೆ ನಡೆಸುತ್ತಿವೆ ಎಂದಿದ್ದಾರೆ.

ಜ್ಯುಯಲರಿ ಅಂಗಡಿಯಲ್ಲಿ ಬೆಳಗಿನ ಸಮಯದಲ್ಲಿ ಸೆಕ್ಯೂರಿಟಿ ವ್ಯವಸ್ಥೆ ಇರಬೇಕಾಗಿತ್ತು, ಆದರೆ ಇಲ್ಲಿ ಆ ವ್ಯವಸ್ಥೆ ಇರಲಿಲ್ಲ. ರಾತ್ರಿಯ ವೇಳೆಗೆ ಮಾತ್ರ ಸೆಕ್ಯೂರಿಟಿ ಇಡಲಾಗಿರುವುದು ಹಾಗೂ ಸಾರ್ವಜನಿಕ ಹಾಗೂ ಗ್ರಾಹಕರ ಸುರಕ್ಷತೆಗೆ ಸಂಬಂಧಿಸಿದ ನಿಯಮಗಳನ್ನು ಪಾಲಿಸಲಾಗಿದೆಯೇ ಎಂಬುದು ಸಹ ತನಿಖೆಯ ಭಾಗವಾಗಿದೆ ಎಂದು ತಿಳಿಸಿದ್ದಾರೆ.

ಕೆಲವು ಪ್ರಮುಖ ತನಿಖಾ ಆಯಾಮಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಆದಷ್ಟು ಬೇಗ ಆರೋಪಿಗಳನ್ನು ಸೆರೆ ಹಿಡಿಯಲಾಗುತ್ತದೆ ಎಂದು ಭರವಸೆ ನೀಡಿದರು.

ಇದಲ್ಲದೆ, ಕಳೆದ ಆರು ತಿಂಗಳ ಹಿಂದೆ ಹುಣಸೂರಿನ ಎಲ್ಲಾ ಚಿನ್ನಾಭರಣ ಅಂಗಡಿ ಮಾಲೀಕರ ಸಭೆ ನಡೆಸಿ, ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಲಾಗಿತ್ತು. ಇದೀಗ ಆ ಸೂಚನೆಗಳ ಅನುಷ್ಠಾನ ಕುರಿತು ಮರುಪರಿಶೀಲನೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

45 mins ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

1 hour ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

1 hour ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

1 hour ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

2 hours ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

2 hours ago