ಹುಣಸೂರು : ತಾಲೂಕಿನ ಗಟಹಳ್ಳಿಯ ಕುಟುಂಬದ ಸಂಬಂಧಿಕರ ನಡುವೆ ಜಮೀನು ವಿವಾದ ವಿಚಾರವಾಗಿ ಗಲಾಟೆ ನಡೆದು ಕ್ರಿಮಿನಾಶಕ ಸೇವಿಸಿ ರೈತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಶಿಲ್ಪಾ (26) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿಲ್ಪಾ ಅವರ ಸ್ಥಿತಿ ಗಂಭೀರವಾಗಿದೆ.
ಶಿಲ್ಪಾ ಪತಿ ಕೆಂಗಣ್ಣ ಅವರ ತಾಯಿ ನಾಗಮ್ಮ ಹೆಸರಲ್ಲಿ 1 ಎಕರೆ ಜಮೀನು ಇದೆ. ಕೆಂಗಣ್ಣನಿಗೆ ಓರ್ವ ಸಹೋದರ ಹಾಗೂ ಸಹೋದರಿ ಇದ್ದಾರೆ. ಜಮೀನು ವಿಚಾರವಾಗಿ ಇವರೆಲ್ಲರ ನಡುವೆ ಭಿನ್ನಭಿಪ್ರಾಯ ಉಂಟಾಗಿದೆ.
ಕೆಂಗಣ್ಣ ಸಹೋದರಿ ಸುಮ ತಾಯಿಯಿಂದ ಜಮೀನು ಬರೆಯಿಸಿಕೊಂಡಿದ್ದಾರೆ ಎಂದು ಆರೋಪಿಸಿ ಕೇಳಲು ಹೋಗಿದ್ದಾರೆ. ಈ ವೇಳೆ ಸುಮ, ಗವಿರಾಜು, ಮಲ್ಲ ಹಾಗೂ ಚಂದ್ರು ಪತ್ನಿ ಶಿಲ್ಪಾ ಮೇಲೆ ಮುಗಿಬಿದ್ದು ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಇದರಿಂದ ಮನನೊಂದ ಶಿಲ್ಪಾ ಕ್ರಿಮಿನಾಶಕ ಸೇವಿಸಿದ್ದಾರೆ.
ಆಸ್ಪತ್ರೆಯಲ್ಲಿ ದಾಖಲಾಗಿರುವ ಶಿಲ್ಪಾ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ನನ್ನ ಪರಿಸ್ಥಿತಿಗೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.
ಈ ಬಗ್ಗೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…
ಬೆಂಗಳೂರು: ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…
ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.…
ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…
ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…