ಮೈಸೂರು: ಹುಣಸೂರಿನ ಪ್ರಾದೇಶಿಕ ಸಾರಿಗೆ ಕಚೇರಿ(ಆರ್‌ಟಿಓ) ಮೇಲೆ ಇಂದು(ಜೂ.12) ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಕಚೇರಿ ಆವರಣದಲ್ಲಿದ್ದ ಬ್ರೋಕರ್‌ಗಳು ಪರಾರಿಯಾಗಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಕಚೇರಿಯಲ್ಲಿ ಅನಧಿಕೃತವಾಗಿ ಸಾರ್ವಜನಿಕರ ದಾಖಲಾತಿ ಮಾಡಿಕೊಳ್ಳುತ್ತಿದ್ದ ಲ್ಯಾಪ್‌ಟಾಪ್, ಸ್ಕ್ಯಾನರ್, 1 ಸ್ಯಾಂಟ್ರೋ ಕಾರು, 3 ಓಮಿನಿ ವ್ಯಾನ್‌ಗಳು ಸೇರಿದಂತೆ ಮತ್ತಿತರ ದಾಖಲಾತಿಗಳನ್ನು ವಶಕ್ಕೆ ಪಡೆದಿದ್ದಾರೆ.
ದಾಳಿ ವೇಳೆ ಆರ್‌ಟಿಓ ಕಚೇರಿಯಲ್ಲಿರಬೇಕಾದ ಅಧಿಕೃತ ಸರ್ಕಾರಿ ದಾಖಲಾತಿಗಳು ಬ್ರೋಕರ್‌ಗಳ ಕಾರಿನಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿದ್ದು, ಇದು ಆರ್‌ಟಿಓ ಕಚೇರಿಯಲ್ಲಿ ನಡೆಯುತ್ತಿದ್ದ ಭ್ರಷ್ಟಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ.
ಭ್ರಷ್ಟಚಾರ ಮತ್ತು ಬ್ರೋಕರ್‌ಗಳ ಹಾವಳಿಯಿಂದ ಬೇಸತ್ತಿದ್ದ ಆರ್‌ಟಿಓ ಅಧಿಕಾರಿಗಳೇ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು ಎನ್ನಲಾಗಿದೆ.
ಹುಣಸೂರು ಆರ್‌ಟಿಓ ಕಚೇರಿಯಲ್ಲಿ ಭ್ರಷ್ಟಾಚಾರ ನಿರಂತರವಾಗಿದ್ದು, ಈ ಭ್ರಷ್ಟಚಾರಕ್ಕೆ ಆರ್‌ಟಿಓ ಅಧಿಕಾರಿಗಳೇ ಬೇಸತ್ತಿದ್ದಾರೆ. ಅಧಿಕಾರಿಗಳಿಗೆ ಈ ಸ್ಥಿತಿಯಾದರೆ ಇನ್ನೂ ಸಾರ್ವಜನಿಕರು ಎಷ್ಟು ಬೇಸತ್ತಿದ್ದಾರೆ ಎನ್ನುವುದು ಊಹೆಗೂ ಮೀರಿದ್ದಾಗಿದೆ.
ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…