ಹುಣಸೂರು: ಮನೆಯ ಹಿತ್ತಲಿನಲ್ಲಿ ಬೆಳೆದಿದ್ದ 4.95ಕೆ.ಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ತಾಲೂಕಿನ ಜಾಬಗೆರೆ ಗ್ರಾಮದಲ್ಲಿ ಜರುಗಿದೆ.
ಗ್ರಾಮದ ನಿವಾಸಿ ತಿಮ್ಮನಾಯಕ ಎಂಬಾತನ ಮನೆಯ ಹಿತ್ತಲಿನಲ್ಲಿ ಗಾಂಜಾ ಬೆಳಿದಿದ್ದ ಬಗ್ಗೆ ಪೊಲೀಸರು ಖಚಿತ ಮಾಹಿತಿ ತಿಳಿದು, ದಾಳಿ ಮಾಡಿದ್ದಾರೆ. ಈ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿ 20ಲಕ್ಷದ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಆರೋಪಿಯನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಗ್ರಾಮದಲ್ಲಿ ಗಾಂಜಾ ಬೆಳೆದಿದ್ದ ಮಾಹಿತಿ ತಿಳಿದು, ಆರೋಪಿ ತಿಮ್ಮನಾಯಕನ ಮನೆ ಮೇಲೆ ದಾಳಿ ಮಾಡಿದಾಗ ಹಿತ್ತಲಿನಲ್ಲಿ ಗಾಂಜಾ ಬೆಳೆದಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾಳೆ ವೇಳೆ ಜಾಬಗೆರೆ ಗ್ರಾ.ಪಂ ಬಿಲ್ ಕಲೆಕ್ಟರ್ ಮಂಜು, ಲೆಕ್ಕಧಿಕಾರಿ ಸಿದ್ದರಾಯು ಎಳಸಂಗಿ, ಸಿಬ್ಬಂದಿ ರೇವಣ್ಣ ಸೇರಿದಂತೆ ಇತರರು ಇದ್ದರು.