ಹುಣಸೂರು : ನಾಪತ್ತೆಯಾಗಿದ್ದ ಹುಣಸೂರಿನ ಖ್ಯಾತ ವಕೀಲ ಶವವಾಗಿ ಪತ್ತೆಯಾಗಿದ್ದಾರೆ. ನಗರದ ಗೋಕುಲ ಬಡಾವಣೆ ನಿವಾಸಿ ವಕೀಲ ಕೆ.ರಾಜು (52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಶವ ಪತ್ತೆಯಾಗಿದೆ.
ಘಟನೆ ವಿವರ :
ನಿನ್ನೆ ಆಫೀಸ್‌ಗೆ ಹೋಗುತ್ತೇನೆಂದು ಹೇಳಿ ಮನೆಯಿಂದ ತೆರಳಿದ್ದ ವಕೀಲ. ರಾತ್ರಿಯಾದರೂ ವಾಪಸ್ ಬಂದಿರಲಿಲ್ಲ. ಈ ಹಿನ್ನೆಲೆ ಕುಟುಂಬಸ್ಥರು ಹುಡುಕಾಟ ನಡೆಸಿ ಬಿಳಿಕೆರೆ ಪೊಲೀಸ್ ಠಾಣೆಗೆ ನಾಪತ್ತೆ ದೂರು ದಾಖಲಿಸಿದ್ದರು.
ಇದನ್ನೂ ಓದಿ:-Wi-Fi ಯೂಸರ್ ನೇಮ್‌ನಲ್ಲಿ ಪಾಕ್ ಜಿಂದಾಬಾದ್ : ಕ್ರಮಕ್ಕೆ ಸ್ಥಳೀಯರ ಆಗ್ರಹ
ಈ ನಡುವೆ ಗುರುವಾರ ಹುಣಸೂರು ತಾಲ್ಲೂಕಿನ ಹೊಸರಾಮನಹಳ್ಳಿಯ ಲಕ್ಷ್ಮಣ ತೀರ್ಥ ನದಿ ಸೇತುವೆ ಬಳಿ ವಕೀಲನ ಕಾರು ಪತ್ತೆಯಾಗಿತ್ತು. ನದಿ ಬಳಿ ಕಾರು ಪತ್ತೆಯಾದ ಹಿನ್ನಲೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿತ್ತು.
ಬೆಳಗಿನಿಂದ ಹೊಸರಾಮನಹಳ್ಳಿಯ ಲಕ್ಷ್ಮಣ ತೀರ್ಥ ನದಿಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದರು. ಇದೀಗ ನದಿಯಲ್ಲಿ ವಕೀಲ ಕೆ.ರಾಜು ಶವವಾಗಿ ಪತ್ತೆಯಾಗಿದ್ದಾರೆ.
ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೈಸೂರು : ಸಂಕ್ರಾಂತಿ ಹೊಸ್ತಿಲಲ್ಲಿ ಮೈಸೂರಿನಲ್ಲಿ ನಡೆಯುವ ಕಲಾ ಹಬ್ಬವಾದ ಬಹುರೂಪಿ ನಾಟಕೋತ್ಸವವಕ್ಕೆ ಮುನ್ನುಡಿ ಬರೆದು ‘ಜಾನಪದ ಉತ್ಸವ’ ರಂಗಾಯಣದಲ್ಲಿ…
ರಸಪ್ರಶ್ನೆ ಕಾರ್ಯಕ್ರಮದ ಸಮಾರಂಭದಲ್ಲಿ ಡಾ.ಚಿದಾನಂದ ಗೌಡ ಮಾಹಿತಿ ಕುಶಾಲನಗರ : ಕುವೆಂಪುರವರ ಉದಯರವಿ ಮನೆಯನ್ನು ಸಂಗ್ರಹಾಲಯ ಮಾಡುವ ಬಗ್ಗೆ ಚಿಂತನೆ…
ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು…
ನಂಜನಗೂಡು : ದ್ವೇಷ ಮರೆತು, ಪ್ರೀತಿ ಗಳಿಸುವಂತೆ ಕೆಲಸ ಮಾಡಿ ಜೀವನ ನಡೆಸಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ…
ಬೆಂಗಳೂರು : ನಟ ಯಶ್ ಅವರು ‘ಟ್ಯಾಕ್ಸಿಕ್’ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಟೀಸರ್ ನಲ್ಲಿನ ಕಾರು…
ಸೋಮನಾಥ : ಗುಜರಾತ್‌ನ ಗಿರ್ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಆಯೋಜಿಸಲಾದ ವಿಧ್ಯುಕ್ತ…