ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗಿದೆ.
ದಿಢೀರ್ ಸುರಿದ ಮಳೆಯಿಂದಾಗಿ ಕೆಲ ರೈತರಿಗೆ ಸಂತಸ ಉಂಟಾದರೆ, ಇನ್ನೂ ಕೆಲ ರೈತರಿಗೆ ತೊಂದರೆ ಎದುರಾಗಿದೆ. ಈ ಭಾಗದಲ್ಲಿ ಈಗಾಗಲೇ ಹಿಂಗಾರು ಬೆಳೆ ಕಟಾವು ಮಾಡಿಕೊಂಡು ಶುಂಠಿ, ಬಾಳೆ, ಮರಗೆಣಸು ಸೇರಿದಂತೆ ಇತರೆ ಬೆಳೆಗಳನ್ನು ನಾಟಿ ಮಾಡಿರುವ ರೈತರಿಗೆ ಮಳೆ ಸಹಾಯಕವಾಗಿದ್ದು ಸಂತಸ ಮೂಡಿಸಿದೆ.
ಆದರೆ ಇನ್ನೂ ಕೆಲ ರೈತರು ರಾಗಿ ಹಾಗೂ ಮುಸುಕಿನ ಜೋಳದ ಕಟಾವು ಮಾಡಿ ಒಕ್ಕಣೆ ಮಾಡದೆ ಹೊಲದಲ್ಲೇ ಇಟ್ಟುಕೊಂಡಿದ್ದ ಬೆಳೆಗೆ ಮಳೆ ನೀರು ತಗುಲಿ ಹಾನಿಯಾಗಿರುವುದು ಕಂಡುಬಂದಿದೆ. ಅಲ್ಲದೆ ಜಾನುವಾರುಗಳಿಗೆ ಸಂಗ್ರಹಿಸಿಟ್ಟಿದ್ದ ಒಣಮೇವು ಸಹ ಮಳೆ ನೀರಿನಿಂದ ತೊಯ್ದು ಹಾನಿಯಾಗಿದೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…