ಮೈಸೂರು : ಖಾಸಗಿ ಬಸ್ ಹಾಗೂ ಸಿಮೆಂಟ್ ತುಂಬಿದ ಲಾರಿ ಮುಖಾಮುಖಿ ಡಿಕ್ಕಿಯಾಗಿ ಮೂವರು ದಾರುಣವಾಗಿ ಮೃತಪಟ್ಟರುವ ಘಟನೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ಶುಕ್ರವಾರ ನಸುಕಿನ ಜಾವ ನಡೆದಿದೆ.
ಇದನ್ನು ಓದಿ : ಆಂಧ್ರಪ್ರದೇಶದಲ್ಲಿ ಘೋರ ದುರಂತ: ಪಟಾಕಿ ಕಾರ್ಖಾನೆ ಸ್ಫೋಟಗೊಂಡು 6 ಮಂದಿ ದುರ್ಮರಣ
ಮೈಸೂರಿನಿಂದ ಹುಣಸೂರಿನ ಕಡೆಗೆ ಬರುತ್ತಿದ್ದ ಸಿಮೆಂಟ್ ತುಂಬಿದ್ದ ಲಾರಿ ಹೆದ್ದಾರಿಯಲ್ಲಿ ಬಿದ್ದಿದ್ದ ಮರಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ
ಕೇರಳದ ಕ್ಯಾಲಿಕಟ್ ನಿಂದ ಬೆಂಗಳೂರಿಗೆ ತೆರಳುತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ ಚಾಲಕ, ಕ್ಲಿನರ್ ಸ್ಥಳದಲ್ಲೇ ಸಾವನ್ನಪ್ಪಿ, ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.
ಘಟನೆ ಸ್ಥಳಕ್ಕೆ ಹುಣಸೂರು ಪೋಲಿಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭಿಸಬೇಕಿದೆ





