ಮೈಸೂರು

ಹುಣಸೂರು | ಮುಷ್ಕರ ಹಿನ್ನಲೆ ಖಾಸಗಿ ಬಸ್‌ಗಳ ಆರ್ಭಟ

ಹುಣಸೂರು: ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳ ಮುಷ್ಕರದಿಂದಾಗಿ ಸಾರ್ವಜನಿಕರು ಹುಣಸೂರಿನಲ್ಲಿ ದುಪ್ಪಟ್ಟು ಹಣ ತೆತ್ತು ಖಾಸಗಿ ವಾಹನಗಳಲ್ಲಿ ಪ್ರಯಾಣ ಬೆಳೆಸಿದರು.

ನಗರದ ಹೊಸ ಬಸ್ ನಿಲ್ದಾಣ ಹಾಗೂ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಎಂದಿನಂತೆ ಬಸ್‌ಗಳು ಬಾರದೆ ಬಿಕೋ ಎನ್ನುತ್ತಿತ್ತು. ಆದರೆ ಬೇರೆಡೆಯಿಂದ ಬಂದಿದ್ದ ಬಸ್‌ಗಳು ಡಿಪೋಗಳಿಗೆ ಹೋಗಲು ತೆರಳುತ್ತಿದ್ದರಿಂದ ಹಾಗೂ ಹಳ್ಳಿಗಳಲ್ಲಿ ರಾತ್ರಿ ತಂಗಿದ್ದ ಬಸ್ ಸಂಚಾರದಿಂದಾಗಿ ಬೆಳಿಗ್ಗೆ ಮೈಸೂರಿಗೆ ಬಸ್ಸುಗಳು ಸಂಚರಿಸಿದವು. ಇದರಿಂದ ಪ್ರಯಾಣಿಕರು, ವಿದ್ಯಾರ್ಥಿಗಳು ಕೊಂಚ ನಿಟ್ಟುಸಿರು ಬಿಟ್ಟರು.
ಬೆಳಿಗ್ಗೆ 9 ನಂತರ ಹುಣಸೂರು ನಗರದಲ್ಲಿ ಮ್ಯಾಕ್ಸಿಕ್ಯಾಬ್, ಮಿನಿಬಸ್‌ಗಳವರು ನಿಲ್ದಾಣಕ್ಕೆ ಆಗಮಿಸಿ ಪ್ರಯಾಣಕರನ್ನು ಹತ್ತಿಸಿಕೊಂಡು ಹೋದರು.

ಸಾರಿಗೆ ಬಸ್‌ಗಳಲ್ಲಿ ಮೈಸೂರಿಗೆ 60 ರೂ. ಇದ್ದ ಬಸ್ ಪ್ರಯಾಣ ದರ 100 ರೂ. ಆಗಿತ್ತು. ಕೆ.ಆರ್.ನಗರ, ಕೋಟೆ ಕಡೆಗೆ ಆಟೋಗಳವರು ದುಬಾರಿ ಹಣ ಪಡೆದು ಕರೆದೊಯ್ಯುತ್ತಿದ್ದುದು ಕಂಡುಬಂದಿತು.

ಆಂದೋಲನ ಡೆಸ್ಕ್

Recent Posts

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

32 mins ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

45 mins ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

51 mins ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

58 mins ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

1 hour ago

ಚಾಮರಾಜನಗರದಲ್ಲಿ ದಿಢೀರ್‌ ಆಲಿಕಲ್ಲು ಸಹಿತ ಮಳೆ ಅಬ್ಬರ

ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…

1 hour ago