ಹುಣಸೂರು: ಕೊಡಗು ಹಾಗೂ ನಾಗರಹೊಳೆ ಉದ್ಯಾನದಲ್ಲಿ ಬೀಳುತ್ತಿರುವ ಜೋರು ಮಳೆಯಿಂದಾಗಿ ಲಕ್ಷ್ಮಣತೀರ್ಥ ನದಿಯು ಭರ್ತಿಯಾಗಿದೆ. ಹೀಗಾಗಿ ನದಿಪಾತ್ರದಲ್ಲಿ ಪ್ರವಾಹದ ಭೀತಿ ಇನ್ನಷ್ಟು ಹೆಚ್ಚಾಗಿದ್ದು, ಆತಂಕ ಮನೆ ಮಾಡಿದೆ.
ಕೊಡಗಿನ ಇರ್ಪುವಿನಲ್ಲಿ ಹುಟ್ಟಿ ನಾಗರಹೊಳೆ ಉದ್ಯಾನದೊಳಗಿಂದ ಹರಿದು ಬರುವ ಲಕ್ಷ್ಮಣತೀರ್ಥ ನದಿಗೆ ನೀರಿನ ಹರಿವು ದಿನೇ ದಿನೇ ಹೆಚ್ಚುತ್ತಿದೆ. ಹಿನ್ನೆಲೆ ತಾಲೂಕಿನ ಅಣೆಕಟ್ಟು ಮೇಲೆ ನೀರು ಹರಿಯಲಾರಂಭಿಸಿವೆ.
ಹೀಗಾಗಿ ತಾಲೂಕಿನ ಜೀವನದಿ ಲಕ್ಷ್ಮಣತೀರ್ಥ ನದಿ ಪಾತ್ರದಲ್ಲಿ ರೆಟ್ ಅಲರ್ಟ್ ಘೋಷಿಸಿದ್ದು, ನದಿ ಅಂಚಿನ ಗ್ರಾಮಸ್ಥರಿಗೆ ಕಾಳಜಿ ಕೇಂದ್ರಕ್ಕೆ ತೆರಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಕೊಡಗು ಭಾಗಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮಡಿಕೇರಿಯ ಜಲಾಶಯಗಳು ತುಂಬಿ ಹೋಗಿವೆ.
ಕೇರಳ ಹಾಗೂ ಮಲೆನಾಡು ಭಾಗಗಳಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದ್ದು, ಕಬಿನಿ ಹಾಗೂ ಕಾವೇರಿ ಜಲಾಶಯಗಳಿಗೆ ನೀರಿನ ಒಳಹರಿವಿನ ಪ್ರಮಾಣವೂ ಹೆಚ್ಚಿದೆ. ಕೆಆರ್‌ಎಸ್ ನಿಂದ ಬುಧವಾರ ರಾತ್ರಿ ೧.೭೨ ಲಕ್ಷ ಕ್ಯೂಸೆಕ್ಸ್‌ನಷ್ಟು ನೀರನ್ನು ಹೊರಬಿಡಾಗಿದೆ. ಇದರಿಂದ ಐತಿಹಾಸಿಕ ಶ್ರೀರಂಗಪಟ್ಟಣ ವೆಲ್ಲೆಸ್ಲಿ ಸೇತುವೆ ಮುಳುಗಡೆಯಾಗಿದೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…