ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ.
ಬುದ್ಧಿಮಾಂದ್ಯ ಪುಟ್ಟಸ್ವಾಮಿ ನಾಯಕ ಅವರು ಗ್ರಾಮದ ಹೊರವಲಯದ ತಮ್ಮ ಜಮೀನಿನಲ್ಲಿ ನಿರ್ಮಿಸಿಕೊಂಡಿದ್ದ ವಾಸದ ಮನೆ ಬಿರುಗಾಳಿಗೆ ಸಿಲುಕಿ ಹಾನಿಗೀಡಾಗಿದೆ. ಹೊಸದಾಗಿ ನಿರ್ಮಿಸಿದ್ದ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಸಂಪೂರ್ಣ ಹಾರಿ ಹೋಗಿದೆ. ಇದರಿಂದ ಮನೆಯೊಳಗಿದ್ದ ದವಸ-ಧಾನ್ಯ, ಬಟ್ಟೆ ಮತ್ತಿತರ ಪದಾರ್ಥಗಳಿಗೆ ಹಾನಿಯಾಗಿದೆ. ಪುಟ್ಟಸ್ವಾಮಿ ನಾಯಕರ ಕುಟುಂಬಕ್ಕೆ ಸರ್ಕಾರ ಸೂಕ್ತ ನೆರವು ಕಲ್ಪಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಚಂದನ್ ಭೇಟಿ ನೀಡಿ ಪರಿಶೀಲಿಸಿ, ಹಿರಿಯ ಅಧಿಕಾರಿಗಳಿಗೆ ಹಾನಿ ಕುರಿತು ವರದಿ ನೀಡಿದ್ದಾರೆ. ಗ್ರಾಮಕ್ಕೆ ಭೇಟಿ ನೀಡಿದ್ದ ಮಾಜಿ ಶಾಸಕ ಎಚ್.ಪಿ. ಮಂಜುನಾಥ್ ಅವರು ಸಾಂತ್ವನ ಹೇಳಿ, ವೈಯಕ್ತಿಕ ನೆರವು ನೀಡಿದರು.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…