ಹುಣಸೂರು : ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ಬೀರನಹಳ್ಳಿ ಗ್ರಾಮದ ಆನಂದ ಎಂಬ 23 ವರ್ಷದ ಯುವಕ ನಾಲ್ಕು ವರ್ಷದ ಮಗುವಿನ ಮೇಲೆ ದೌರ್ಜನ್ಯ ಎಸಗಿದ ಆರೋಪಿ.
ಆರೋಪಿ ಆನಂದ ಘಟನೆ ಬಳಿಕ ಪರಾರಿಯಾಗಿದ್ದು, ಮಗು ತೀವ್ರ ಅಸ್ವಸ್ಥವಾಗಿದೆ.
ಮಗುವನ್ನು ಹುಣಸೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಈ ಸಂಬಂಧ ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.





