Mysore
35
few clouds

Social Media

ಗುರುವಾರ, 09 ಏಪ್ರಿಲ 2026
Light
Dark

ಹುಣಸೂರು | ಹುಲಿ ಓಡಾಟ: ಶಾಲಾ ಮಕ್ಕಳಲ್ಲಿ ಆತಂಕ

ಹುಣಸೂರು: ಮೈಸೂರು‌ ಜಿಲ್ಲೆ ಹುಣಸೂರು ತಾಲ್ಲೂಕಿನ ನಂಜಾಪುರ ಗ್ರಾಮದಲ್ಲಿ ಹುಲಿ ಓಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಶಾಲಾ ಮಕ್ಕಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಈ ಘಟನೆ ನಡೆದಿದ್ದು, ಹುಲಿ ಓಡಾಡುವ ದೃಶ್ಯ ಶಾಲೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ರೈತರು ಜಮೀನಿನಲ್ಲಿ‌ ಕೆಲಸ ಮಾಡುವಾಗ ಹುಲಿ ದಾಳಿ ಮಾಡಲು ಯತ್ನಿಸಿದ್ದು, ರೈತರು ಹುಲಿ ದಾಳಿಯಿಂದ ತಪ್ಪಿಸಿಕೊಂಡು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಶೋಧ ಕಾರ್ಯ ನಡೆಸಿದ್ದು, ಬೋನು ಅಳವಡಿಸಲು ಕ್ರಮ ಕೈಗೊಂಡಿದ್ದಾರೆ.

Tags:
error: Content is protected !!