ಮೈಸೂರು

ಹುಣಸೂರು| ಜಮೀನಿಗೆ ಹೋದಾಗ ದುರಂತ: ವಿದ್ಯುತ್‌ ತಂತಿ ತುಳಿದು ತಾಯಿ, ಮಗ ಸಾವು

ಮೈಸೂರು: ವಿದ್ಯುತ್‌ ತಂತಿ ತುಳಿದು ತಾಯಿ, ಮಗ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.

50 ವರ್ಷದ ನೀಲಮ್ಮ ಹಾಗೂ 19 ವರ್ಷದ ಹರೀಶ್‌ ಮೃತಪಟ್ಟರವರು. ಎಮ್ಮೆಕೊಪ್ಪಲು ಗ್ರಾಮದ ಬಳಿ ಜಮೀನಿನ ಕೆಲಸಕ್ಕೆ ತೆರಳಿದ್ದ ವೇಳೆ ವಿದ್ಯುತ್‌ ಕಂಬದಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೊದಲು ತಾಯಿ ನೀಲಮ್ಮ ಅವರಿಗೆ ವಿದ್ಯುತ್‌ ತಗುಲಿದೆ. ತಾಯಿ ರಕ್ಷಣೆ ಮಾಡಲು ಹೋದ ಮಗ ಕೂಡ ಬಲಿಯಾಗಿದ್ದಾನೆ. ಈ ಸಂಬಂಧ ಹುಣಸೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

1 hour ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

2 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

4 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

6 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

6 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

7 hours ago