ಮೈಸೂರು

ಹುಣಸೂರು | ತೆರೆಯದ ರಾಗಿ ಖರೀದಿ ಕೇಂದ್ರ ; ರೈತ ಸಂಘ ಪ್ರತಿಭಟನೆ

ಹುಣಸೂರು: ಮೈಸೂರು ಜಿಲ್ಲಾ ಭಾಗದಲ್ಲಿ ರಾಗಿ ಬೆಳೆ ಬೆಳೆದು 2-3 ತಿಂಗಳಾದರೂ ಕೂಡ ಸಕಾಲದಲ್ಲಿ ರಾಗಿ ಕೇಂದ್ರವನ್ನು ತೆರೆಯದ ಕಾರಣ ರೈತರು ತಾವು ಬೆಳೆದಿರುವ ರಾಗಿಯನ್ನು ದಲ್ಲಾಳಿಗಳ ಪಾಲು ಮಾಡುತ್ತಿದ್ದಾರೆ. ಇನ್ನಾದರೂ ರಾಗಿ ಕೇಂದ್ರವನ್ನು ಶೀಘ್ರವಾಗಿ ತೆರೆಯಬೇಕೆಂದು ಒತ್ತಾಯಿಸಿ ರೈತ ಸಂಘದಿಂದ ಹುಣಸೂರು ಉಪವಿಭಾಗಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.

ಖರೀದಿ ಕೇಂದ್ರದಲ್ಲಿ ಕೆಲವು ಅಧಿಕಾರಿಗಳು ದಲ್ಲಾಳಿಗಳ ಜೊತೆ ಶಾಮೀಲಾಗುತ್ತಿದ್ದು, ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ವೇಳೆ ರೈತ ಸಂಘ ಹಾಗೂ ದಸಂಸ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು. ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ತಾಲ್ಲೂಕು ಅಧ್ಯಕ್ಷ ಬೆಂಕಿಪುರ ಚಿಕ್ಕಣ್ಣ, ರಾಜ್ಯ ಮಹಿಳಾ ಕಾರ್ಯದರ್ಶಿ ನೇತ್ರಾವತಿ, ಜಿಲ್ಲಾ ಉಪಾಧ್ಯಕ್ಷ ಆಲಿಜಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಗ್ರಹಾರ ರಾಮೇಗೌಡ, ಜಿಲ್ಲಾ ಖಜಾಂಚಿ ಈಶ್ವರ, ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಅರಸ್, ಜಿಲ್ಲಾ ಪದಾಧಿಕಾರಿ ಬಸವರಾಜೇಗೌಡ, ಹೆಚ್.ಡಿ.ಕೋಟೆ ರೈತ ಸಂಘದ ಅಧ್ಯಕ್ಷ ಮಹದೇವನಾಯಕ, ಕೆ.ಆರ್.ನಗರ ರೈತ ಸಂಘದ ಅಧ್ಯಕ್ಷ ಮಲ್ಲೇಶ್, ದಸಂಸ ಮುಖಂಡರಾದ ಅತ್ತಿಕುಪ್ಪೆ ರಾಮಕೃಷ್ಣ, ಸಿದ್ದೇಶ್, ಪ್ರಕಾಶ್, ಚಿಕ್ಕಹುಣಸೂರು ರಾಜು, ನಾರಾಯಣ್, ಗಿರೀಶ್, ರವಿನಾಯಕ್, ಟಿ.ಎಂ. ಮೌನೇಶ್, ಶಿವರಾಜ್, ಮುಂತಾದವರು ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

7 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

11 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

11 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

11 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

11 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

11 hours ago