ಹುಣಸೂರು: ಆಂಬುಲೆನ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೋರ್ವನಿಗೆ ಚಾಕುವಿನಿಂದ ಇರಿದಿರುವ ಘಟನೆ ಹುಣಸೂರು ನಗರದ ಒಂಟೆಪಾಳ್ಯಬೋರೆ ಬಡಾವಣೆಯಲ್ಲಿ ನಡೆದಿದೆ.
ಅಪ್ರೋಜ್ ಎಂಬಾತನೇ ಚಾಕು ಇರಿತಕ್ಕೆ ಒಳಗಾದ ವ್ಯಕ್ತಿಯಾಗಿದ್ದು, ಖಾಸಗಿ ಆಂಬುಲೆನ್ಸ್ ಮಾಲೀಕ ಕಾಸಿಫ್ ಎಂಬಾತನ ವಿರುದ್ಧ ದೂರು ದಾಖಲಾಗಿದೆ.
ಕಳೆದ ಕೆಲ ದಿನಗಳ ಹಿಂದೆ ಅಪ್ರೋಜ್ ಹಾಗೂ ಕಾಸಿಫ್ ನಡುವೆ ಆಂಬುಲೆನ್ಸ್ ಸೇವೆ ಕಳುಹಿಸುವ ವಿಷಯಕ್ಕೆ ಸಂಬಂಧಿಸಿದತೆ ವಾಟ್ಸಪ್ ಗ್ರೂಪ್‌ನಲ್ಲಿ ಮತಿನ ಚಕಮಕಿ ನಡೆದಿತ್ತು.
ಇದೇ ದ್ವೇಷದ ಹಿನ್ನೆಲೆಯಲ್ಲಿ ಕಾಸಿಫ್ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಸದ್ಯ ಗಂಭೀರ ಗಾಯಗೊಂಡಿರುವ ಅಪ್ರೋಜ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





