Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಹುಣಸೂರು | ಕಲ್ಲಹಳ್ಳಿ ಗ್ರಾಮ ಪಂಚಾಯಿತಿಗೆ ಜಿಪಂ CEO ಗಾಯಿತ್ರಿ ಭೇಟಿ

ಹುಣಸೂರು: ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿಗೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯಿತ್ರಿ ಭೇಟಿ ನೀಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಡಳಿತ ವ್ಯವಸ್ಥೆ ಕುರಿತು ಜನಪ್ರತಿನಿಧಿಗಳು ಹಾಗೂ ಪಿಡಿಒ ಅವರೊಂದಿಗೆ ಸಭೆ ನಡೆಸಿ ಅಭಿವೃದ್ಧಿ ಕುರಿತಂತೆ ಚರ್ಚಿಸಿದರು.

ಗ್ರಾಮ ಪಂಚಾಯಿತಿ ಕಟ್ಟಡಗಳ ಉನ್ನತೀಕರಣಕ್ಕಾಗಿ ಸರ್ಕಾರ ಸಾಕಷ್ಟು ಸಹಾಯ ನೀಡುತ್ತಿದ್ದರೂ ಇಂದಿಗೂ ಸಣ್ಣ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡುತ್ತಿರುವ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯವಸ್ಥೆ ನೋಡಿ  ಬೇಸರ ವ್ಯಕ್ತಪಡಿಸಿದರು.

ಇಂದಿಗೂ ಅರಸು ಅವರ ಜಾಗದಲ್ಲಿ ಪಂಚಾಯಿತಿ ಕಾರ್ಯಕಲಾಪಗಳು ನಡೆಯುತ್ತಿದ್ದು, ಸರ್ಕಾರದ ಜಾಗದಲ್ಲಿ ಸ್ವಂತ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ಹಣದ ಲಭ್ಯತೆ ಇದ್ದರೂ, ಸ್ವಂತ ಕಟ್ಟಡ ಮತ್ತು ಬಾಪೂಜಿ ಸೇವಾ ಕೇಂದ್ರ ವ್ಯವಸ್ಥೆ ಸರಿಯಾದ ವ್ಯವಸ್ಥೆ ಇರುವುದಿಲ್ಲ. ಹಾಗಾಗಿ ಇರುವ ಅಡೆತಡೆಗಳನ್ನು ನಿವಾರಿಸಲು ಗ್ರಾಮದ ಮುಖಂಡರು, ಜನಪ್ರತಿನಿಧಿಗಳು ಸಭೆ ನಡೆಸುವ ಮೂಲಕ ಒಮ್ಮತದ ನಿರ್ಧಾರದೊಂದಿಗೆ ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗಬೇಕೆಂದು ಸಲಹೆ ನೀಡಿದರು.

ಜನರೇ ಗ್ರಾಮದ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿದ್ದು, ಪಂಚಾಯಿತಿಗಳಲ್ಲಿರುವ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿ, ಗ್ರಾಮದ ಸುಸ್ಥಿರ ಅಭಿವೃದ್ಧಿಗಾಗಿ ಶ್ರಮಿಸುವುದು ಜನಪ್ರತಿನಿಧಿಗಳ ಜವಾಬ್ದಾರಿ ಮತ್ತು ಕರ್ತವ್ಯವಾಗಿರುತ್ತದೆ. ಹಾಗಾಗಿ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸೇವೆಗೆ ಯಾವುದೇ ತೊಂದರೆಯಾಗದಂತೆ ಅಭಿವೃದ್ಧಿ ಕೆಲಸಗಳನ್ನು ನಿರ್ವಹಿಸಿಕೊಂಡು ಹೋಗಬೇಕಾಗಿ ನಿರ್ದೇಶಿಸಿದರು.

ಇನ್ನು ಶಾಲಾ ಮಕ್ಕಳಿಗೆ ಬಸ್ಸಿನ ವ್ಯವಸ್ಥೆ ಕಲ್ಪಿಸುವಂತೆ ಸದಸ್ಯರೆಲ್ಲರೂ ಮನವಿ ಮಾಡಿದ ಹಿನ್ನೆಲೆ, ಸ್ಥಳದಲ್ಲೇ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸಿದರು.

ಮ-ನರೇಗಾ ಯೋಜನೆಯಡಿ ಸಮುದಾಯ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಹಾಗೂ ಚರಂಡಿ ನೀರು ನೇರ ಕೆರೆಗೆ ಹರಿದು ಹೋಗುವುದನ್ನು ತಪ್ಪಿಸಲು ಸಮುದಾಯ ಬಚ್ಚಲುಗುಂಡಿ ನಿರ್ಮಾಣಕ್ಕೆ ಮುಂದಾಗಬೇಕು. ಸಂಜೀವಿನಿ ಒಕ್ಕೂಟದಡಿ ಮಹಿಳೆಯರು ತಮ್ಮ ಸ್ವಾವಲಂಬಿ ಜೀವನ ನಿರ್ಮಿಸಿಕೊಳ್ಳುವುದಕ್ಕೆ ಸಂಜೀವಿನಿ ಶೆಡ್ ನಿರ್ಮಾಣ ಹಾಗೂ ಕಸವನ್ನು ಎಲ್ಲೆಂದರಲ್ಲಿ ಎಸೆಯುವ ಬದಲು ಘನ ತ್ಯಾಜ್ಯ ವಿಲೇವಾರಿ ನಿರ್ಮಾಣ ಮಾಡಿಕೊಂಡು ಸಮರ್ಪಕವಾಗಿ ಕಸ ವಿಲೇವಾರಿ ಮಾಡಲು ಸೂಕ್ತ ಜಾಗ ಗುರುತಿಸಿ ಕ್ರಮ ವಹಿಸಲು ಪಿಡಿಒ ಅವರಿಗೆ ಸೂಚಿಸಿದರು.

ಬಳಿಕ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಉದ್ಯಾನವನ, ಪೌಷ್ಠಿಕ ಕೈ ತೋಟ ನಿರ್ಮಾಣ ಮಾಡಿಕೊಳ್ಳಲು ಕ್ರಿಯಾ ಯೋಜನೆಯಲ್ಲಿ ಸೇರ್ಪಡೆ ಮಾಡಿಕೊಳ್ಳಲು ತಿಳಿಸಿದರು.

ಗ್ರಾಮದ ವ್ಯಾಪ್ತಿಯಲ್ಲಿ ಜಾನುವಾರು ಕೊಟ್ಟಿಗೆ ಹಾಗೂ ಜಮೀನುಗಳಿಗೆ ತೆರಳಲು ಸೂಕ್ತ ದಾರಿ ಮಾಡಿಕೊಡಬೇಕಾಗಿ ಜನಪ್ರತಿನಿಧಿಗಳು ಕೇಳಿದ ಮನವಿಗೆ ಸ್ಪಂದಿಸಿ, ನರೇಗಾ ಯೋಜನೆಯಡಿ 60:40 ಅನುಪಾತ ಅವಶ್ಯಕವಿದ್ದು, ಈ ಅನುಪಾತ ಮೀರದಂತೆ ಕಾಮಗಾರಿ ಕೈಗೊಳ್ಳಿರಿ ಎಂದು ಸಲಹೆ ನೀಡಿದರು.

ಜೊತೆಗೆ ಪಿ.ಆರ್.ಇ.ಡಿ ಇಲಾಖೆ ಅವರಿಗೆ ಸೂಕ್ತವಾದ ಜಾಗದಲ್ಲಿ ಸಮರ್ಪಕವಾದ ರಸ್ತೆ ಕಲ್ಪಿಸಿಕೊಡುವಂತೆ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದರು.

ವಸತಿ ಯೋಜನೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಯವರಿಂದ ಮಾಹಿತಿ ಪಡೆದುಕೊಂಡಿದ್ದು, ಇರುವ ತಾಂತ್ರಿಕ ಸಮಸ್ಯೆ ಕುರಿತು ಆಲಿಸಿದರು. ಹೊಸದಾಗಿ ತೆಗೆದುಕೊಂಡಿರುವ ಮನೆಗಳ ಕುರಿತು ತಾಂತ್ರಿಕವಾಗಿ ಆಗಿರುವಂತಹ ಸಮಸ್ಯೆಗಳ ಕುರಿತು ಪರಿಹರಿಸುವಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.

ಬಳಿಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮಂಗಳೂರು ಮಾಳ ಗ್ರಾಮ ಮತ್ತು ಬಿಜಾಪುರ ಕಾಲೋನಿಯಲ್ಲಿರುವ ಸರ್ಕಾರಿ ಶಾಲೆಗೆ ಭೇಟಿ ನೀಡಿ, ಅಲ್ಲಿನ ಸ್ಥಳೀಯರೊಂದಿಗೆ ಗ್ರಾಮದಲ್ಲಿರುವಂತಹ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರಕ್ಕೆ ಸೂಚಿಸಿದರು.

ಈ ವೇಳೆ ನರೇಗಾದಿಂದ ಚರಂಡಿ ವ್ಯವಸ್ಥೆ, ಮಕ್ಕಳ ಲಾಲನೆ ಪಾಲನೆಗೆ ಅವಶ್ಯಕ ಅಂಗನವಾಡಿ ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಮಕ್ಕಳ ಕಲಿಕೆಗೆ ಅಡಚಣೆಯಾಗುತ್ತಿರುವುದನ್ನು ಮನಗಂಡು ಬಿಜಾಪುರ ಕಾಲೋನಿಯಲ್ಲಿರುವ ಸರ್ಕಾರಿ ಶಾಲಾ ಆವರಣದಲ್ಲಿರುವ ಒಂದು ಕೊಠಡಿಯನ್ನು ಕಂಡು ಕಾಮಗಾರಿ ಪೂರ್ಣಗೊಳ್ಳುವವರೆಗೆ ಹತ್ತಿರದಲ್ಲಿರುವ ಶಾಲೆಯಲ್ಲಿ ಅಂಗನವಾಡಿ ನಡೆಸುವಂತೆ ಮುಖ್ಯೋಪಾಧ್ಯಾರಿಗೆ ಸೂಚಿಸಿದರು.

Tags: