ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ ಹತ್ತಿಮರ ಬೀದಿಯಲ್ಲಿ ನಡೆದಿದೆ.
ಸಾಕಮ್ಮ, ರಮೇಶ್ ನಾಯಕ ಹಾಗೂ ಶ್ರೀನಿವಾಸ್ ಎಂಬುವವರಿಗೆ ಗಾಯಗಳಾಗಿದ್ದು, ವಿದ್ಯಾ ಹಾಗೂ ಅವರ ಪತಿ ಶಿವಕುಮಾರ್ ವಿರುದ್ಧ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಕಮ್ಮ ಅವರಿಗೆ ಸೇರಿದ ನಿವೇಶನದಲ್ಲಿ ಮಣ್ಣು ಹಾಕಲಾಗಿತ್ತು. ಮಣ್ಣು ರಸ್ತೆಗೆ ಹರಡಿಕೊಂಡಿತ್ತು. ಇದನ್ನು ತೆರವುಗೊಳಿಸುವಂತೆ ಗಲಾಟೆ ನಡೆದಿದ್ದು, ಒಬ್ಬರಿಗೊಬ್ಬರು ಬಡಿದಾಡಿಕೊಂಡಿದ್ದಾರೆ. ಗಾಯಾಳುಗಳನ್ನು ಹುಣಸೂರಿನ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…