Mysore
25
broken clouds

Social Media

ಬುಧವಾರ, 22 ಏಪ್ರಿಲ 2026
Light
Dark

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಒಡಿಶಾ ಮೂಲದ ರಾಜ ಕಪೂರ್, ಬಸಂತ್ ಕುಮಾ‌ರ್ ಹಾಗೂ ಶಮರ್‌ ಮಿತ್ರ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಈ ಮೂವರು ಆರೋಪಿಗಳು ಬಿಳಿಕೆರೆಯ ಕೆರೆ ಹತ್ತಿರ ಗಾಂಜಾ ಪ್ಯಾಕೆಟ್ ಗಳನ್ನು ಸಿದ್ಧಪಡಿಸಿಕೊಂಡು ಮಾರಾಟ ಮಾಡುತ್ತಿದ್ದರು.

ಖಚಿತ ಮಾಹಿತಿ ಮೇರೆಗೆ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಡಿವೈಎಸ್‌ಪಿ ರವಿರವರ ಮಾರ್ಗದರ್ಶನದಲ್ಲಿ ದಾಳಿ ಮಾಡಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಅವರ ಬಳಿಯಿದ್ದ 3 ಕೆಜಿ 170 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಈ ಸಂಬಂಧ ಬಿಳಿಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:
error: Content is protected !!