ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಒಡಿಶಾ ಮೂಲದ ರಾಜ ಕಪೂರ್, ಬಸಂತ್ ಕುಮಾರ್ ಹಾಗೂ ಶಮರ್ ಮಿತ್ರ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಈ ಮೂವರು ಆರೋಪಿಗಳು ಬಿಳಿಕೆರೆಯ ಕೆರೆ ಹತ್ತಿರ ಗಾಂಜಾ ಪ್ಯಾಕೆಟ್ ಗಳನ್ನು ಸಿದ್ಧಪಡಿಸಿಕೊಂಡು ಮಾರಾಟ ಮಾಡುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಡಿವೈಎಸ್‌ಪಿ ರವಿರವರ ಮಾರ್ಗದರ್ಶನದಲ್ಲಿ ದಾಳಿ ಮಾಡಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಅವರ ಬಳಿಯಿದ್ದ 3 ಕೆಜಿ 170 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಈ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…