ಹುಣಸೂರು: ಗೂಡ್ಸ್ ವಾಹನ ಪಲ್ಟಿಯಾಗಿ 13 ಕೂಲಿ ಕಾರ್ಮಿಕರಿಗೆ ಗಾಯವಾಗಿರುವ ಘಟನೆ ಹುಣುಸೂರು ತಾಲೂಕಿನ ಗದ್ದಿಗೆ ರಸ್ತೆಯ ಸಂಜೀವಿನಿ ನಗರದ ಬಳಿ ನಡೆದಿದೆ.
ಹುಣಸೂರು ತಾಲೂಕಿನ ಸಿಬಿಟಿ ಕಾಲೋನಿಯ ಚಿಕ್ಕಣ್ಣ, ಪಾರ್ಥ, ಕುಮುದ, ಮಂಜುಳ, ಪಾರ್ವತಿ, ಚಿನ್ನಮುತ್ತಮ್ಮ, ತರಿಕಲ್‌ನ ವಳ್ಳಿಯಮ್ಮ, ರಾಣಿ, ಮಹದೇವಮ್ಮ, ಮಂಗಳ ಗಾಯಾಳುಗಳಾಗಿದ್ದಾರೆ.
ಗಾಯಾಳುಗಳಲ್ಲಿ ಐದು ಮಂದಿಗೆ ಹುಣಸೂರಿನ ಕಾವೇರಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.
ಹುಣಸೂರು ತಾಲೂಕಿನ ವಿವಿಧ ಗ್ರಾಮಗಳಿಂದ ಹೆಚ್‌ಡಿ ಕೋಟೆ ತಾಲೂಕು ಹ್ಯಾಂಡ್ ಪೋಸ್ಟ್‌ಗೆ ತೆರಳುವ ಸಮಯ ಈ ಅಪಘಾತ ಸಂಭವಿಸಿದೆ. ಈ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…