ಮೈಸೂರು: ಕುಡಿತದ ಚಟಕ್ಕೆ ದಾಸನಾಗಿ ಕೆಲಸಕ್ಕೆ ಹೋಗದ ಪತಿಗೆ ಬುದ್ಧಿವಾದ ಹೇಳಿದ ಪತ್ನಿ ಮೇಲೆ ಬಿಸಿ ಸಾಂಬಾರ್ ಸುರಿದ ಘಟನೆ ಮೈಸೂರಿನ ಹಿನಕಲ್‌ನಲ್ಲಿ ನಡೆದಿದೆ.
ಗಾಯಗೊಂಡ ಪತ್ನಿ ಮಂಗಳಮ್ಮ ಅವರಿಗೆ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಮೀಪದಲ್ಲೇ ಇದ್ದ ಮಗಳು ಸುಮತಿಗೂ ಸುಟ್ಟಗಾಯಗಳಾಗಿದೆ.
ಮೂಲತಃ ನಂಜನಗೂಡು ನಿವಾಸಿಗಳಾದ ರಾಜು ಹಾಗೂ ಮಂಗಳಮ್ಮ ಜೀವನೋಪಾಯಕ್ಕಾಗಿ ೪ ತಿಂಗಳ ಹಿಂದೆ ಮೈಸೂರಿಗೆ ಬಂದು ಹಿನಕಲ್‌ನಲ್ಲಿ ನೆಲೆಸಿದ್ದರು. ಕುಡಿತದ ಚಟಕ್ಕೆ ದಾಸನಾಗಿದ್ದ ರಾಜು ಕೆಲಸಕ್ಕೆ ಹೋಗುತ್ತಿರಲಿಲ್ಲ.
ಕಳೆದ ಎರಡು ದಿನಗಳ ಹಿಂದೆ ಕೆಲಸ ಮುಗಿಸಿ ಮಂಗಳಮ್ಮ ಮನೆಗೆ ಹಿಂದಿರುಗಿದಾಗ ರಾಜು ಮನೆಯಲ್ಲೇ ಕುಡಿದು ಬಿದ್ದಿದ್ದ ಎನ್ನಲಾಗಿದೆ. ಕೆಲಸಕ್ಕೆ ಹೋಗಲಿಲ್ಲ ಎಂದರೆ ಸಂಸಾರ ಹೇಗೆ ನಡೆಯುತ್ತದೆ. ಕುಡಿತ ಬಿಟ್ಟು ಕೆಲಸಕ್ಕೆ ಹೋಗು ಎಂದು ಪತಿಗೆ ಬುದ್ಧಿವಾದ ಹೇಳಿದ್ದಾರೆ.
ಇಷ್ಟಕ್ಕೇ ಸಿಟ್ಟಿಗೆದ್ದ ರಾಜು ನೀನು ಇದ್ದರೆ ತಾನೆ ಕೆಲಸಕ್ಕೆ ಹೋಗು ಎನ್ನುತ್ತೀಯ. ನನ್ನ ಸಂಪಾದನೆಯಲ್ಲಿ ನಾನು ಕುಡಿಯುತ್ತೇನೆ ಎಂದು ಅರಚಾಡಿದ್ದಾನೆ. ನಂತರ ಒಲೆ ಮೇಲೆ ಕುದಿಯುತ್ತಿದ್ದ ಬಿಸಿ ಸಾಂಬಾರ್ ಎತ್ತಿ ಮಂಗಳಮ್ಮ ಮೇಲೆ ಸುರಿದಿದ್ದಾನೆ. ಈ ವೇಳೆ ಪಕ್ಕದಲ್ಲಿದ್ದ ಮಗಳು ಸುಮತಿ ಮೇಲೂ ಸಾಂಬಾರ್ ಚೆಲ್ಲಿದೆ. ಗಾಯಗೊಂಡ ತಾಯಿ, ಮಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳಮ್ಮ ಅವರು ವಿಜಯನಗರ ಠಾಣೆಯಲ್ಲಿ ರಾಜು ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…