ಮೈಸೂರು: ಹೆಂಡತಿ ತವರು ಮನೆಗೆ ಹೋದಳೆಂದು ಕೋಪಗೊಂಡ ಪತಿರಾಯ ತನ್ನ ಮಗನ ಎದುರೇ ಪತ್ನಿಗೆ ಬೆಂಕಿ ಹಚ್ಚಿದ ಅಮಾನವೀಯ ಘಟನೆ ಜಿಲ್ಲೆಯ ಎಚ್.ಡಿ.ಕೋಟೆಯ ಹನುಮಂತ ನಗರದಲ್ಲಿ ನಡೆದಿದೆ.
ಮಧುರ ಎಂಬುವವರೇ ಗಂಭೀರ ಗಾಯಗೊಂಡಿರುವ ಪತ್ನಿಯಾಗಿದ್ದು, ಆಕೆಯ ಗಂಡ ಮಲ್ಲೇಶ್ ನಾಯ್ಕ್ ಎಂಬಾತನಿಂದ ಕೃತ್ಯ ನಡೆದಿದೆ.
ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ವಿಜಯನಗರ ಜಿಲ್ಲೆ ಕೂಡ್ಲಗಿ ತಾಲ್ಲೂಕಿನ ಬಿಬಿ ತಾಂಡದವನಾದ ಮಲ್ಲೇಶ್, ಕಳೆದ ಎಂಟು ವರ್ಷಗಳ ಹಿಂದೆ ಅದೇ ಗ್ರಾಮದ ಮಧುರಳನ್ನು ವಿವಾಹವಾಗಿದ್ದ.
ಸದ್ಯ ಮಲ್ಲೇಶ್ ನಾಯ್ಕ್ ಎಚ್.ಡಿ.ಕೋಟೆಯ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ.
ವರದಕ್ಷಿಣ ತರುವಂತೆ ಹೆಂಡತಿಗೆ ಪದೇ ಪದೇ ಕಿರುಕುಳ ನೀಡುತ್ತಿದ್ದ ಮಲ್ಲೇಶ್, ಪ್ರತಿ ದಿನ ಕುಡಿದು ಬಂದು ಜಗಳವಾಡುತ್ತಿದ್ದ. ಈ ನಡುವೆ ಕೆಲ ದಿನಗಳ ಹಿಂದೆ ಮಧುರ ತವರು ಮನೆಗೆ ಹೋಗಿ ಬಂದಿದ್ದರು. ಈ ವಿಚಾರವನ್ನೇ ಇಟ್ಟುಕೊಂಡು ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.
ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ…
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ನಷ್ಟದಿಂದ ಹೊರಬರಲು ಬಸ್‌ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದೆ. ಆದರೆ ಈ…
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಶಾಖೆಗೆ ಪ್ರತಿನಿತ್ಯ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ…
ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ…
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…