ಮೈಸೂರು : ‘‘ನಾನು ಮೋದಿ ಪರಿವಾರ-ಮೋದಿಗಾಗಿ ಮೀಸಲು ಈ ಭಾನುವಾರ’’ ಎಂಬ ಘೋಷವಾಕ್ಯದೊಂದಿಗೆ ಮನೆ ಮನೆ ಸಂಪರ್ಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಎಸ್.ಎ.ರಾಮದಾಸ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅವರು, ಏ.೨೧ರ ಭಾನುವಾರ ಬೆಳಿಗ್ಗೆ ೮ಗಂಟೆಗೆ ನಗರಪಾಲಿಕೆ ವಾರ್ಡ್ ಸಂಖ್ಯೆ ೫೫ರ ಬೂತ್ ಸಂಖ್ಯೆ ೨೩೮ರಲ್ಲಿ ವಿದ್ಯಾರಣ್ಯಪುರಂನ ತಮ್ಮ ಮನೆಯಿಂದ ಸಂಪರ್ಕ ಕಾರ್ಯಕ್ರಮ ಆರಂಭಿಸಲಿದ್ದೇವೆ ಎಂದು ತಿಳಿಸಿದ್ದಾರೆ.
ಬೂತ್‌ನಲ್ಲಿ ೭೦೫ ಮತದಾರರಿದ್ದು, ಪ್ರತಿಯೊಬ್ಬರನ್ನೂ ಸಂಪರ್ಕ ಮಾಡಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಮತ್ತು ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸಿ ಈ ಬಾರಿ ಶೇ.ನೂರರಷ್ಟು ಮತದಾನವನ್ನು ಬೂತ್ ಸಂಖ್ಯೆ ೨೩೮ರಲ್ಲಿ ಮಾಡಿಸಿ ಬಿಜೆಪಿಗೆ ಹೆಚ್ಚು ಮತಗಳು ಬರುವಂತೆ ಮಾಡುವ ಉದ್ದೇಶದಿಂದ ಮನೆ ಮನೆ ಸಂಪರ್ಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…