ಮೈಸೂರು

ನಾನು ಮೋದಿ ಹೇಳಿದ ಕೆಲಸ ಮಾಡುವ ಮೇಸ್ತ್ರಿ: ಸಂಸದ ಪ್ರತಾಪ್‌ ಸಿಂಹ

ಮೈಸೂರು: ಮೈಸೂರು-ಬೆಂಗಳೂರು ಹೆದ್ದಾರಿ ನಿರ್ಮಾಣದ ವಿಚಾರದಲ್ಲಿ ಬಿಜೆಪಿ ಸಂಸದ ಬುರುಡೆ ಬಿಡುತ್ತಾನೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಪ್ರತಾಪ ಸಿಂಹ ತಿರುಗೇಟು ನೀಡಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ನನ್ನ ರಸ್ತೆಯಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ರಸ್ತೆ. ನಾನು ಒಬ್ಬ ಮೇಸ್ತ್ರಿಯಷ್ಟೆ. ಮೋದಿ ಹೇಳಿದ ಕೆಲಸ ಮಾಡುವ ಮೇಸ್ತ್ರಿ. ಮುಖ್ಯಮಂತ್ರಿಯಾದವರು ಪದ ಪ್ರಯೋಗದಲ್ಲಿ ಎಚ್ಚರ ವಹಿಸಬೇಕು. ಎಲ್ಲರನ್ನೂ ತಾತ್ಸರದಿಂದ ಮಾತಾಡುವುದನ್ನು ನಿಲ್ಲಿಸಲಿ. ರಾಜಕೀಯ ಮಾಡಬೇಕು ಎಂದುಕೊಂಡವರು ಹೇಳಿಕೊಳ್ಳಲು ಏನೂ ಇಲ್ಲದಿದ್ದಾಗ ಈ ರೀತಿ ಕ್ರೆಡಿಟ್ ಪಾಲಿಟಿಕ್ಸ್ ಶುರು ಮಾಡುತ್ತಾರೆ’ ಎಂದು ತಿರುಗೇಟು ನೀಡಿದರು.

ಇದು ೮೫೦೦ ಕೋಟಿ ಯೋಜನೆಯಾಗಿದೆ. ಇದಕ್ಕೆ ಸಿದ್ದರಾಮಯ್ಯ ಸರ್ಕಾರದಿಂದ ೮ ರೂಪಾಯಿ ಬಂದಿದ್ದರು ಸಿದ್ದರಾಮಯ್ಯ-ಎಚ್‌.ಸಿ ಮಹದೇವಪ್ಪ ಜೋಡಿ ರಸ್ತೆ ಎಂದೇ ಹೆಸರಿಡೋಣ ಎಂದು ವ್ಯಂಗ್ಯವಾಡಿದರು.

ಯಾರು ಬುರುಡೆ ಬಿಡುತ್ತಿದ್ದಾರೆ, ಯಾರು ಖಾಲಿ ಡಬ್ಬ ಅಲ್ಲಾಡಿಸುತ್ತಿದ್ದಾರೆ ಎಂಬುದು ಆ ರಸ್ತೆಯಲ್ಲಿ ಓಡಾಡುತ್ತಿರುವ ಜನರಿಗೆ ಗೊತ್ತಿದೆ. ರಸ್ತೆಯಲ್ಲಿ ನೀರು ತುಂಬಿದಾಗ, ರಸ್ತೆಯಲ್ಲಿ ಅಪಘಾತ ಹೆಚ್ಚಾದಾಗ ಜನರು ಬೈದಿದ್ದು, ನನ್ನನ್ನೇ. ಎಲ್ಲ ಸಮಸ್ಯೆ ಪರಿಹರಿಸಿದ್ದು ಪ್ರತಾಪ್‌ ಸಿಂಹನೇ. ಸಮಸ್ಯೆ ಎದುರಾಗಿದ್ದಾಗ ಸಿದ್ದರಾಮಯ್ಯ, ಎಚ್‌.ಸಿ ಮಹದೇವಪ್ಪ ಎಲ್ಲಿ ಹೋಗಿದ್ದರು ಎಂದು ಪ್ರಶ್ನಿಸಿದರು.

ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಪ್ರಸ್ತಾಪ ಸಂಬಂಧಿಸಿದಂತೆ, ಸಿದ್ದರಾಮಯ್ಯ ಪ್ರೀತಿ, ಅಭಿಮಾನ, ಗೌರವ ಮತ್ತು ನಿಷ್ಠೆ ಟಿಪ್ಪುಗೆ ಹೊರತು ಮಹಾರಾಜರಿಗಲ್ಲ. ಈಗಾಗಿಯೇ ನಮ್ಮ ಸರ್ಕಾರದ ಅವಧಿಯಲ್ಲಿ ಮಹಾರಾಜರ ಹೆಸರನ್ನು ನಿಲ್ದಾಣಕ್ಕೆ ಇಡಲು ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿತ್ತು ಎಂದರು.

ಐಷಾರಾಮಿ ಜೆಟ್‌ನಲ್ಲಿ ಸಿದ್ದರಾಮಯ್ಯ ಪ್ರಯಾಣಿದ ಬಗ್ಗೆ ಪ್ರತಿಕ್ರಿಯಿಸಿ, ತಮ್ಮ ನಡೆ ಸಮರ್ಥಿಸಿಕೊಳ್ಳಲು ಸಿದ್ದರಾಮಯ್ಯ ಅವರು ಪ್ರಧಾನಿಯನ್ನು ಎಳೆದು ತಂದಿದ್ದಾರೆ. ದೇಶಕ್ಕೆ ಇರುವುದು ಒಬ್ಬರೇ ಪ್ರಧಾನಿ. ದೇಶದಲ್ಲಿ 29 ಜನ ಮುಖ್ಯಮಂತ್ರಗಳಿದ್ದಾರೆ. ನೀವು ಸುಮ್ಮನೆ ಪ್ರಧಾನಿಗೆ ಹೋಲಿಕೆ ಮಾಡಿಕೊಳ್ಳಬೇಡಿ ಎಂದು ಕುಟುಕಿದರು.

ಸಿದ್ದರಾಮಯ್ಯ ಮೈಸೂರು ಅಭಿವೃದ್ಧಿಯನ್ನು ಮಹಾರಾಜರು ತಮ್ಮ ಮನೆಯಿಂದ ದುಡ್ಡು ತಂದು ಮಾಡಿಲ್ಲವೆಂದು ಈ ಹಿಂದೆ ಹೇಳಿದ್ದರು. ಈಗ ಆಸ್ಪತ್ರ ನಾನು ಮಾಡಿದೆ. ಮನೆ ಯಜಮಾನಿಗೆ ೨ ಸಾವಿರ ಕೊಟ್ಟಿದ್ದಾಗಿ ಹೇಳುತ್ತಿದ್ದು, ಇವರ ಮನೆಯಿಂದಾ ದುಡ್ಡು ತಂದು ಕೊಟ್ಟಿರಾ ಎಂದು ನಾವು ಕೇಳಿದರೇ ಹೇಗೆ ಎಂದು ಪ್ರಶ್ನಿಸಿದರು.

andolanait

Recent Posts

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

9 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

9 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

10 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

10 hours ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

10 hours ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

10 hours ago