Mysore
20
overcast clouds
Light
Dark

ನಾನು ಬಿಜೆಪಿ-ಜೆಡಿಎಸ್ ಷಡ್ಯಂತ್ರಕ್ಕೆ ಬಲಿಯಾಗುವವ ನಾನಲ್ಲ: ಸಿದ್ದರಾಮಯ್ಯ

ಮೈಸೂರು: ನಾನು ಈ ನೆಲದ ಶೋಷಿತರು, ಶ್ರಮಿಕರು, ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ಇದ್ದೀನಿ. ಇವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ ಎನ್ನುವ ಕಾರಣಕ್ಕೆ ನನ್ನನ್ನು ಕೆಳಗಿಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಈ ನಾಡಿನ‌ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿಂದು (ಆ 9) ಹೇಳಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದಿಂದ ಮುಡಾದಲ್ಲಿ ಹಗರಣ ನಡೆಸಲಾಗಿದೆ ಎಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸರ್ಕಾರ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಟಕ್ಕರ್‌ ಕೊಟ್ಟಿರುವ ಸಿಎಂ ಸಿದ್ದರಾಮಯ್ಯ, ಮೈಸೂರಿನಲ್ಲಿಂದು ನಡೆಸಿದ ಜನಾಂದೋಲನ ಕಾರ್ಯಕ್ರಮದಲ್ಲಿ ಸಿಎಂ ಕಿಡಿಕಾರಿದ್ದಾರೆ.

ಬಿಜೆಪಿ, ಜೆಡಿಎಸ್ ಎಷ್ಟೇ ಕಪಟ ಉದ್ಸೇಶದ ಪಾದಯಾತ್ರೆ ನಡೆಸಿದರೂ ನಾನು ಹೆದರುವುದಿಲ್ಲ. ರಾಜಭವನ ಮತ್ತು ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ನಡೆಸಿದರೂ ನಾನು ಹೆದರುವುದಿಲ್ಲ. ನಾನು ಇವರ ಷಡ್ಯಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಕೂರುವವನಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಎಚ್ಚರಿಸಿದರು.