ಮೈಸೂರು: ನಾನು ಈ ನೆಲದ ಶೋಷಿತರು, ಶ್ರಮಿಕರು, ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ಇದ್ದೀನಿ. ಇವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ ಎನ್ನುವ ಕಾರಣಕ್ಕೆ ನನ್ನನ್ನು ಕೆಳಗಿಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಈ ನಾಡಿನ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿಂದು (ಆ 9) ಹೇಳಿದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದಿಂದ ಮುಡಾದಲ್ಲಿ ಹಗರಣ ನಡೆಸಲಾಗಿದೆ ಎಂದು ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಟಕ್ಕರ್ ಕೊಟ್ಟಿರುವ ಸಿಎಂ ಸಿದ್ದರಾಮಯ್ಯ, ಮೈಸೂರಿನಲ್ಲಿಂದು ನಡೆಸಿದ ಜನಾಂದೋಲನ ಕಾರ್ಯಕ್ರಮದಲ್ಲಿ ಸಿಎಂ ಕಿಡಿಕಾರಿದ್ದಾರೆ.
ಬಿಜೆಪಿ, ಜೆಡಿಎಸ್ ಎಷ್ಟೇ ಕಪಟ ಉದ್ಸೇಶದ ಪಾದಯಾತ್ರೆ ನಡೆಸಿದರೂ ನಾನು ಹೆದರುವುದಿಲ್ಲ. ರಾಜಭವನ ಮತ್ತು ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ನಡೆಸಿದರೂ ನಾನು ಹೆದರುವುದಿಲ್ಲ. ನಾನು ಇವರ ಷಡ್ಯಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಕೂರುವವನಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಎಚ್ಚರಿಸಿದರು.
ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…