Mysore
20
overcast clouds
Light
Dark

ಪ್ರಜ್ವಲ್‌ ಪರ ನಾನಿಲ್ಲ, ಆತನ ತಪ್ಪು ಸಾಬೀತಾದರೆ ಶಿಕ್ಷೆ ಕೊಡಿ: ಎಚ್.ಡಿ ಕುಮಾರಸ್ವಾಮಿ

ಮೈಸೂರು: ಸಂಸದ ಪ್ರಜ್ವಲ್‌ ರೇವಣ್ಣ ಪರವಾಗಿ ನಾನಿಲ್ಲ. ಆತನ ತಪ್ಪು ಸಾಬೀತಾದರೆ ಶಿಕ್ಷೆ ಕೊಡಿ. ಕಾಂಗ್ರೆಸ್‌ ಈ ವಿಚಾರದಲ್ಲಿ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ. ಮುಖ್ಯಮಂತ್ರಿಗಳೇ ಅಧಿಕಾರ ಶಾಶ್ವತವಲ್ಲ. ನಿಮ್ಮ ಅಧಿಕಾರಿ ದುರುಪಯೋಗದ ವಿರುದ್ಧ ಕಾನೂನು ಹೋರಾಟ ಮಾಡಬೇಕಾಗುತ್ತದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ್ದಾರೆ.

ಇಂದು (ಮೇ.22) ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಪತ್ರಿಕಗೋಷ್ಠಿ ನಡೆಸಿ ಮಾತನಾಡಿದ ಅವರು, ವಿರೋಧಿಗಳಿಗೆ ತೊಂದರೆ ನೀಡುವುದು. ದ್ವೇಷದ ರಾಜಕಾರಣ ಮಾಡುವುದಷ್ಟೆ ಸರ್ಕಾರದ ಕೆಲಸ ಆಗಿದೆ. ಸರ್ಕಾರದ ಪ್ರಯೋಜಕತ್ವದಲ್ಲಿ ಮೇ 30 ರಂದು ಹಾಸನದಲ್ಲಿ ಪ್ರತಿಭಟನೆ ಆಯೋಜನೆ ಮಾಡಲಾಗಿದೆ. ನನಗೆ ಹೇಳಿದ್ದರೆ ನಾನೇ ಒಂದಿಷ್ಟು ಮಹಿಳೆಯರನ್ನು ಪ್ರತಿಭಟನೆಗೆ ಕಳುಹಿಸುತ್ತಿದ್ದೇ ಎಂದು ಹಾರಿಹಾಯ್ದರು.

ದೇವರಾಜೇಗೌಡ, ಶಿವರಾಮೇಗೌಡ, ಡಿಕೆ ಶಿವಕುಮಾರ್‌ ಪೆನ್‌ಡ್ರೈವ್‌ ವಿತರಣೆ ಹಿಂದೆ ಇದ್ದಾರೆ. ಅರ್ಧ ನಿಮಿಷದಲ್ಲೆ ಎಲ್ಲವೂ ತೀರ್ಮಾನಾಗಿದೆ. ಪೊಲೀಸರ ರಕ್ಷಣೆಯಲ್ಲಿ ಎಂಟು ಜನ ಸೇರಿದಂತೆ ಕಾರ್ತಿಕ್‌ ಸಹ ಇದ್ದಾನೆ. ಯಾವ ಕಾರಣಕ್ಕೆ ಇನ್ನೂ ಕಾರ್ತಿಕ್‌ ಬಂಧನವಾಗಿಲ್ಲ? ನ್ಯಾಯಾಲಯಕ್ಕೆ ಯಾಕೆ ಹಾಜರು ಪಡಿಸಿಲ್ಲ ಹೇಳಿ?  ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ನನಗೆ ಡಿಸಿಎಂ ಡಿಕೆ ಶಿವಕುಮಾರ್‌ ಕಂಡರೆ ಅಸೂಯೆ ಅಂತ ಹೇಳಿದ್ದಾರೆ. ನಾನು ಯಾಕೆ ಅವರನ್ನು ನೋಡಿ ಅಸೂಯೆ ಪಡೆಯಲಿ. ಅಧಿಕಾರ ಯಾರ ಅಪ್ಪನ ಮನೆ ಆಸ್ತಿಯೂ ಅಲ್ಲ. ರಾಜಕೀಯದಲ್ಲಿ ಏಳು ಬೀಳು ಅದು ಭಗವಂತನ ಇಚ್ಚೆ. ಇದರಲ್ಲಿ ಅಸೂಯೆ ಯಾಕೆ, ಪ್ರಧಾನಿ ಸ್ಥಾನವನ್ನೇ ಅತ್ಯಂತ ಸುಲಭವಾಗಿ ತೆರವು ಮಾಡಿದ ವಂಶ ನಮ್ಮದು. ಎಲ್ಲ ಅಧಿಕಾರವನ್ನು ನಾವು ನೋಡಿಯಾಗಿದೆ. ನಮಗೆ ಅಧಿಕಾರ ಬೇಡ ಅಂದರೂ ಬಂದಿದೆ. ನಾವು ಅಧಿಕಾರ ಹುಡುಕಿಕೊಂಡು ಹೋಗಿಲ್ಲ. ನಿಮಗೆ ಇದು ಗೊತ್ತಿರಲಿ ಎಂದು ಹೇಳಿದರು.

ಪೆನ್‌ಡ್ರೈವ್‌ನ ಮೂಲ ವ್ಯಕ್ತಿ ಕಾರ್ತಿಕ್ . ಈತ ಹಾಸನದ ಕಾಂಗ್ರೆಸ್‌ ಅಭ್ಯರ್ಥಿ ಇಟ್ಟುಕೊಂಡು ಡಿಕೆ ಸುರೇಶ್‌ ಹತ್ತಿರ ಮೊದಲು ಹೋಗಿದ್ದರು. ಬಳಿಕ ವಿಡಿಯೋಗಳನ್ನು ಸಿಡಿ ಶಿವಕುಮಾರ್‌ ಕಾಪಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ನನ್ನ ಬಳಿ ಇರುವ ಪೆನ್ಡ್ರೈವ್‌ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರದ್ದು. ಅದನ್ನು ನಾನು ಈಗ ಬಿಟ್ಟರೆ ಅದು ನನ್ನದೇ ಸೃಷ್ಟಿ ಅಂತ ನೀವು ಹೇಳುತ್ತೀರಿ. ಎಸ್ಐಟಿಗೆ ಇದುವರೆಗೂ ಕೊಟ್ಟ ಯಾವ ಪ್ರಕರಣ ತಾರ್ಕಿತ ಅಂತ್ಯ ಕಂಡಿದೆ ಹೇಳಿ? ನನ್ನ ಅವಧಿಯಲ್ಲಿ ಯಾವ ಪ್ರಕರಣವನ್ನು ಎಸ್‌ಐಟಿಗೆ ಕೊಟ್ಟಿರಲಿಲ್ಲ ಎಂದರು.

ಮೈತ್ರಿಗೂ ಪೆನ್‌ಡ್ರೈವ್‌ಗೂ ಸಂಬಂಧ ಇಲ್ಲ. ಪ್ರಜ್ವಲ್‌ ಕರ್ನಾಟಕದಲ್ಲಿ ಇದ್ದಾಗಲೇ ನನ್ನ ಸಂಪರ್ಕದಲ್ಲಿ ಇರಲಿಲ್ಲ ಇನ್ನೂ ಈಗ ಇರುತ್ತಾನಾ? ಪೆನ್‌ಡೈವ್‌ ಪ್ರಕರಣದಿಂದ ದೇವೇಗೌಡ ಕುಟುಂಬಕ್ಕೆ ಸ್ಪಲ್ಪ ಡ್ಯಾಮೇಜ್‌ ಆಗಿದೆ. ನಾನು ಈಗ ವಿದೇಶಕ್ಕೆ ಹೋದರೆ ಪ್ರಜ್ವಲ್ ರಕ್ಷಣೆಗೆ ಹೋಗಿದ್ದಾರೆ ಅಂತ ಇವರು ಸುದ್ದಿ ಹಬ್ಬಿಸಿ ಬಿಡುತ್ತಾರೆ. ಯಾವ ಕರ್ಮ ಗ್ರಹಚಾರ ನಮಗೆ. ಪ್ರಜ್ವಲ್ ವಿದೇಶಕ್ಕೆ ಹೋಗುವುದು ಅವತ್ತೆ ಗೊತ್ತಾಗಿದ್ದರೆ ನಾನು ಅವತ್ತೆ ಅವನನ್ನು ತಡೆಯುತ್ತಿದ್ದೆ. ಪ್ರಜ್ವಲ್ ಭಯ ಬಿದ್ದಿರಬಹುದು ಅದಕ್ಕೆ ಭಾರತಕ್ಕೆ ಬರುತ್ತಿಲ್ಲ. ವಕೀಲರ ಸಲಹೆ ಬೇಡ ನೈತಿಕತೆ ಉಳಿಸಿಕೊಳ್ಳಲು ದೇಶಕ್ಕೆ ವಾಪಸ್ಸು ಬಾ. ತಪ್ಪು ಮಾಡಿಲ್ಲ ಅನ್ನುವುದಾರೆ ಎದುರಿಸು. ತಪ್ಪು ಮಾಡಿದ್ದರೆ ಈ ನಾಡಿನ ಕಾನೂನು ಪ್ರಕಾರ ಶಿಕ್ಷೆ ಅನುಭವಿಸು ಎಂದು ಪ್ರಜ್ವಲ್‌ಗೆ  ಹೇಳಿದರು.