Mysore
31
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

ಸಿಎಂ ಡಿಕೆಶಿ ಹಾಗೂ ಸಚಿವ ಲಕ್ಷ್ಮಣ್ ಸವದಿ ಸಹಕಾರದಿಂದ ಅಧ್ಯಕ್ಷನಾಗಿದ್ದೇನೆ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಲಕ್ಷ್ಮಣ್ ಸವದಿ ಅವರ ಸಹಕಾರದಿಂದ ಅಧ್ಯಕ್ಷನಾಗಿದ್ದೇನೆ ಎಂದು ಮೈಸೂರಿನಲ್ಲಿ ಜಿ.ಟಿ. ದೇವೇಗೌಡ ಹೇಳಿದ್ದಾರೆ.

ಈ ನಡುವೆ, ಜೆಡಿಎಸ್‌ನಿಂದ ಒಂದು ಹೆಜ್ಜೆ ಹೊರಗಿಟ್ಟಿರುವ ಜಿ.ಟಿ. ದೇವೇಗೌಡ ಅವರಿಗೆ ಕಾಂಗ್ರೆಸ್ ನಾಯಕರ ಬೆಂಬಲ ಕುತೂಹಲಕ್ಕೆ ಕಾರಣವಾಗಿದೆ.

ಇತ್ತ, ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಹೆಸರೇಳದೆ ತಿರುಗೇಟು ನೀಡಿರುವ ಜಿ.ಟಿ.ದೇವೇಗೌಡ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪಕ್ಷ ಮುಖ್ಯವಲ್ಲ, ಅಲ್ಲಿ ಜಿ.ಟಿ. ದೇವೇಗೌಡ ಮಾತ್ರ ಮುಖ್ಯ ಎಂದಿದ್ದಾರೆ.

ತಮ್ಮ ವಿರುದ್ಧ ಘಟಾನುಘಟಿ ನಾಯಕರು ಸ್ಪರ್ಧಿಸಿದ್ದರೂ ಜನರು ತಮ್ಮ ಕೈಬಿಟ್ಟಿಲ್ಲ ಎಂದು ಹೇಳಿದ ಜಿ.ಟಿ. ದೇವೇಗೌಡ, ಹಿಂದೆ ಮುಖ್ಯಮಂತ್ರಿಯ ವಿರುದ್ಧವೇ 35 ಸಾವಿರ ಮತಗಳ ಅಂತರದಿಂದ ಗೆದ್ದಿದ್ದನ್ನು ನೆನಪಿಸಿಕೊಂಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಇದೀಗ ಮಾತಿನ ಸಮರ ಜೋರಾಗಿದೆ.

Tags:
error: Content is protected !!