ಮೈಸೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ನಿನ್ನೆ ( ಮಾರ್ಚ್ 13 ) ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಗೊಳಿಸಿದೆ. ಮೈಸೂರು – ಕೊಡಗು ಕ್ಷೇತ್ರದ ಟಿಕೆಟ್ ಅನ್ನು ಯದುವೀರ್ ಒಡೆಯರ್ ಅವರಿಗೆ ನೀಡಲಾಗಿದ್ದು, ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿದೆ.
ಇನ್ನು ಟಿಕೆಟ್ ಘೋಷಣೆಯಾಗುವ ಮುನ್ನವೇ ಟಿಕೆಟ್ ಯಾರಿಗೆ ಸಿಕ್ಕರೂ ಪಕ್ಷದ ಪರ ಕೆಲಸ ಮಾಡುತ್ತೇನೆ ಎಂದು ಘೋಷಿಸಿದ್ದ ಪ್ರತಾಪ್ ಸಿಂಹ ಟಿಕೆಟ್ ಕೈತಪ್ಪಿದ ಬಳಿಕವೂ ಸಹ ಅದೇ ಮಾತುಗಳನ್ನು ಆಡಿದ್ದರು. ಇನ್ನು ಇಂದು ( ಮಾರ್ಚ್ 14 ) ಈ ಕುರಿತಾಗಿ ಮತ್ತೊಂದು ಟ್ವೀಟ್ ಮಾಡಿರುವ ಪ್ರತಾಪ್ ಸಿಂಹ “ನನ್ನ ಪ್ರೀತಿಯ ಕಾರ್ಯಕರ್ತರೇ ಮತ್ತು ಕೊಡಗು-ಮೈಸೂರಿನ ಬಂಧುಗಳೇ, ಟಿಕೆಟ್ ಕೈತಪ್ಪಿದೆ, ಇವನ ಬಳಿ ಹೇಗೆ ಕೆಲಸಕ್ಕಾಗಿ ಕರೆ ಮಾಡುವುದು ಎಂದು ಅಂಜಬೇಡಿ, ಈಗಲೂ ಮತ್ತು ಮಾಜಿಯಾದ ಮೇಲೂ ಕೈಲಾದ ಕೆಲಸ ಮಾಡಿಕೊಡುತ್ತೇನೆ. ಸೋಮವಾರದಿಂದ ಪ್ರಚಾರ ಕಾರ್ಯಕ್ಕೆ ಬರುತ್ತೇನೆ” ಎಂದು ಬರೆದುಕೊಂಡಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…