ಮೈಸೂರು

ಟಿಕೆಟ್‌ ಕೈತಪ್ಪಿದೆ ಕೆಲಸಕ್ಕಾಗಿ ಇವನಿಗೆ ಹೇಗೆ ಕರೆ ಮಾಡುವುದು ಎಂದು ಅಂಜಬೇಡಿ: ಪ್ರತಾಪ್‌ ಸಿಂಹ

ಮೈಸೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ನಿನ್ನೆ ( ಮಾರ್ಚ್‌ 13 ) ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಗೊಳಿಸಿದೆ. ಮೈಸೂರು – ಕೊಡಗು ಕ್ಷೇತ್ರದ ಟಿಕೆಟ್‌ ಅನ್ನು ಯದುವೀರ್‌ ಒಡೆಯರ್ ಅವರಿಗೆ ನೀಡಲಾಗಿದ್ದು, ಹಾಲಿ ಸಂಸದ ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್‌ ಕೈತಪ್ಪಿದೆ.

ಇನ್ನು ಟಿಕೆಟ್‌ ಘೋಷಣೆಯಾಗುವ ಮುನ್ನವೇ ಟಿಕೆಟ್‌ ಯಾರಿಗೆ ಸಿಕ್ಕರೂ ಪಕ್ಷದ ಪರ ಕೆಲಸ ಮಾಡುತ್ತೇನೆ ಎಂದು ಘೋಷಿಸಿದ್ದ ಪ್ರತಾಪ್‌ ಸಿಂಹ ಟಿಕೆಟ್‌ ಕೈತಪ್ಪಿದ ಬಳಿಕವೂ ಸಹ ಅದೇ ಮಾತುಗಳನ್ನು ಆಡಿದ್ದರು. ಇನ್ನು ಇಂದು ( ಮಾರ್ಚ್‌ 14 ) ಈ ಕುರಿತಾಗಿ ಮತ್ತೊಂದು ಟ್ವೀಟ್‌ ಮಾಡಿರುವ ಪ್ರತಾಪ್‌ ಸಿಂಹ “ನನ್ನ ಪ್ರೀತಿಯ ಕಾರ್ಯಕರ್ತರೇ ಮತ್ತು ಕೊಡಗು-ಮೈಸೂರಿನ ಬಂಧುಗಳೇ, ಟಿಕೆಟ್ ಕೈತಪ್ಪಿದೆ, ಇವನ ಬಳಿ ಹೇಗೆ ಕೆಲಸಕ್ಕಾಗಿ ಕರೆ ಮಾಡುವುದು ಎಂದು ಅಂಜಬೇಡಿ, ಈಗಲೂ ಮತ್ತು ಮಾಜಿಯಾದ ಮೇಲೂ ಕೈಲಾದ ಕೆಲಸ ಮಾಡಿಕೊಡುತ್ತೇನೆ. ಸೋಮವಾರದಿಂದ ಪ್ರಚಾರ ಕಾರ್ಯಕ್ಕೆ ಬರುತ್ತೇನೆ” ಎಂದು ಬರೆದುಕೊಂಡಿದ್ದಾರೆ.

andolana

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

1 hour ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago