Mysore
23
overcast clouds

Social Media

ಮಂಗಳವಾರ, 24 ಜೂನ್ 2025
Light
Dark

ಅಂತರ್ಜಾತಿ ವಿವಾಹದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು?

ಮೈಸೂರು: ನಗರದಲ್ಲಿಂದು ಜನ ಸ್ಪಂದನಾ ಮತ್ತು ಮಾನವ ಮಂಟಪದಲ್ಲಿ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ತಾವು ಅಂತರ್ಜಾತಿ ವಿವಾಹ ಆಗುವ ಬಯಕೆ ಹೊಂದಿದ್ದರು ಎಂದು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

ನಾನು ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆಯಾಗಬೇಕು ಎಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಇದರಿಂದಾಗಿ ನಾನು ಮದುವೆಯಾಗಲಿಲ್ಲ. ಕೊನೆಗೆ ನಮ್ಮ ಜನಾಂಗದ ಹುಡುಗಿಯನ್ನೇ ಮದುವೆಯಾಗಬೇಕಾಯಿತು ಎಂದು ತಮ್ಮ ಕಾಲೇಜು ದಿನಗಳಲ್ಲಿ ಅರಳಿದ್ದ ತಮ್ಮ ಪ್ರೇಮಾಂಕುರ ವಿಷಯವನ್ನು ಸಿಎಂ ಸಿದ್ದರಾಮಯ್ಯ ಮೆಲುಕು ಹಾಕಿದ್ದಾರೆ.

ಅಂತರ್ಜಾತಿ ವಿವಾಹಗಳಿಂದ ಮಾತ್ರ ಜಾತಿ ನಾಶ ಸಾಧ್ಯ. ಅಂಬೇಡ್ಕರ್‌, ಕುವೆಂಪು ಆಶಯದಂತೆ ಸಮ ಸಮಾಜ ನಿರ್ಮಾಣ ಮಾಡಬೇಕಾದರೇ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಇದಕ್ಕೆ ನಮ್ಮ ಬೆಂಬಲ ಸದಾ ಇರುತ್ತದೆ ಎಂದು ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು.

Tags:
error: Content is protected !!