ಮೈಸೂರು: ನಗರದಲ್ಲಿಂದು ಜನ ಸ್ಪಂದನಾ ಮತ್ತು ಮಾನವ ಮಂಟಪದಲ್ಲಿ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ತಾವು ಅಂತರ್ಜಾತಿ ವಿವಾಹ ಆಗುವ ಬಯಕೆ ಹೊಂದಿದ್ದರು ಎಂದು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
ನಾನು ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆಯಾಗಬೇಕು ಎಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಇದರಿಂದಾಗಿ ನಾನು ಮದುವೆಯಾಗಲಿಲ್ಲ. ಕೊನೆಗೆ ನಮ್ಮ ಜನಾಂಗದ ಹುಡುಗಿಯನ್ನೇ ಮದುವೆಯಾಗಬೇಕಾಯಿತು ಎಂದು ತಮ್ಮ ಕಾಲೇಜು ದಿನಗಳಲ್ಲಿ ಅರಳಿದ್ದ ತಮ್ಮ ಪ್ರೇಮಾಂಕುರ ವಿಷಯವನ್ನು ಸಿಎಂ ಸಿದ್ದರಾಮಯ್ಯ ಮೆಲುಕು ಹಾಕಿದ್ದಾರೆ.
ಅಂತರ್ಜಾತಿ ವಿವಾಹಗಳಿಂದ ಮಾತ್ರ ಜಾತಿ ನಾಶ ಸಾಧ್ಯ. ಅಂಬೇಡ್ಕರ್, ಕುವೆಂಪು ಆಶಯದಂತೆ ಸಮ ಸಮಾಜ ನಿರ್ಮಾಣ ಮಾಡಬೇಕಾದರೇ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಇದಕ್ಕೆ ನಮ್ಮ ಬೆಂಬಲ ಸದಾ ಇರುತ್ತದೆ ಎಂದು ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…