ಮೈಸೂರು

ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ: ಸಿದ್ದರಾಮಯ್ಯ

ಮೈಸೂರು: ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯಾ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕುಮಾರಸ್ವಾಮಿ ಅವರು ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವ ಕುರಿತಾಗಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸ ನಂಬಿಕೆ ಇದೆ. ಅವರು ಕಾನೂನು ರೀತ್ಯಾ ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯವರು ಸಿಬಿಐಗೆ ಒಂದು ಪ್ರಕರಣವಾದರೂ ಕೊಟ್ಟಿದ್ದಾರಾ? ಹಿಂದೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಪ್ರಕರಣ, ಲಾಟರಿ ಪ್ರಕರಣ, ಸಚಿವರಾದ ಕೆ.ಜೆ. ಜಾರ್ಜ್‌ ಅವರ ಮೇಲಿನ ಆರೋಪ, ಪರೇಶ್‌ ಮೇಸ್ತ ಪ್ರಕರಣಗಳನ್ನು ಸಿಬಿಐಗೆ ವಹಿಸಲಾಯಿತು. ಈ ಪ್ರಕರಣಗಳಲ್ಲಿ ಯಾರಿಗಾದರೂ ಶಿಕ್ಷೆಯಾಗಿದೆಯೇ ಎಂದು ಪ್ರಶ್ನಿಸಿದರು.

ಹಿಂದೆ ಬಿಜೆಪಿಯವರೇ ಸಿಬಿಐಯನ್ನು ಕರಪ್ಷನ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ. ದೇವೇಗೌಡರು ಚೋರ್‌ ಬಚಾವೋ ಸಂಸ್ಥೆ ಎಂದು ಹೇಳಿದ್ದರು. ಈಗ ಸಿಬಿಐ ಮೇಲೆ ವಿಶ್ವಾಸ ಬಂತಾ? ನನಗೆ ಸಿಬಿಐ ಮೇಲೆ ವಿಶ್ವಾಸವಿದೆ. ಆದರೆ, ನಮ್ಮ ಪೊಲೀಸರ ಬಗ್ಗೆ ನಂಬಿಕೆ ಇದೆ. ಅದಕ್ಕಾಗಿ ವಿಶೇಷ ತನಿಖಾ ತಂಡ ರಚನೆ ಮಾಡಿದ್ದೇವೆ ಎಂದು ವಿವರಿಸಿದರು.

ನಮ್ಮ ಸರ್ಕಾರ ಕಾನೂನು ರೀತ್ಯಾ ನಡೆಯುತ್ತಿರುವ ಕೆಲಸದಲ್ಲಾಗಲಿ, ತನಿಖೆಯಲ್ಲಾಗಲಿ ಮಧ್ಯಪ್ರವೇಶ ಮಾಡುವುದಿಲ್ಲ. ಅವರು ಸರಿಯಾದ ರೀತಿಯಲ್ಲಿ ಕೆಲಸ ಮಾಡುವ ನಂಬಿಕೆ ಇದೆ. ನಾನು ಯಾವತ್ತೂ ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡಿ ಎಂದು ಹೇಳಿಲ್ಲ. ಅಂತರರಾಷ್ಟ್ರೀಯ ಮಟ್ಟದ ತನಿಖೆಯ ಅಗತ್ಯವಿಲ್ಲ. ನಮ್ಮ ಪೊಲೀಸರ ಮೇಲೆ ನಂಬಿಕೆ ಇಟ್ಟಿರಬೇಕಲ್ಲ. ಎಲ್ಲ ಅಪರಾಧ ಪ್ರಕರಣಗಳ ತನಿಖೆ ಯಾರು ಮಾಡುತ್ತಾರೆ? ನಮ್ಮ ಪೊಲೀಸರಲ್ಲವೇ? ಅವರದ್ದೇ ವಿಶೇಷ ತನಿಖಾದಳ ರಚಿಸಿರುವುದಲ್ಲವೇ? ನಮ್ಮ ಪೊಲೀಸರನ್ನು ನಂಬಬೇಕಲ್ಲವೆ ಎಂದು ಪ್ರಶ್ನಿಸಿದರು.

ಈ ಪ್ರಕರಣದಲ್ಲಿ ನಾನಾಗಲಿ, ಡಿ.ಕೆ.ಶಿವಕುಮಾರ್‌ ಆಗಲಿ, ಯಾರೂ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ ಸಿಎಂ ನನಗೆ ಎಸ್.ಐ.ಟಿ. ಮೇಲೆ ವಿಶ್ವಾಸವಿದೆ. ಸತ್ಯಾಸತ್ಯತೆ ಹೊರಬರುವ ನಂಬಿಕೆ ಇದೆ ಎಂದು ತಿಳಿಸಿದರು.

ರೇವಣ್ಣ ಬಂಧನದಲ್ಲಿ ರಾಜಕೀಯ ಹಸ್ತಕ್ಷೇಪ ಇಲ್ಲ

ರೇವಣ್ಣ ಅವರ ಬಂಧನದಲ್ಲಿ ರಾಜಕೀಯ ಹಸ್ತಕ್ಷೇಪವಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು ಅವರ ಮೇಲಿನ ಆರೋಪದಲ್ಲಿ ಹುರುಳೇ ಇಲ್ಲದಿದ್ದರೆ ನಿರೀಕ್ಷಣಾ ಜಾಮೀನು ಕೋರಿದ್ದೇಕೆ? ನಿರೀಕ್ಷಣಾ ಜಾಮೀನು ಅರ್ಜಿ ಯಾಕೆ ತಿರಸ್ಕೃತವಾಯಿತು ಎಂದು ಪ್ರಶ್ನಿಸಿದರು.

andolana

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

22 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

27 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

36 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

1 hour ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago