ಮೈಸೂರು: ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯಾ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವ ಕುರಿತಾಗಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸ ನಂಬಿಕೆ ಇದೆ. ಅವರು ಕಾನೂನು ರೀತ್ಯಾ ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಬಿಜೆಪಿಯವರು ಸಿಬಿಐಗೆ ಒಂದು ಪ್ರಕರಣವಾದರೂ ಕೊಟ್ಟಿದ್ದಾರಾ? ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಪ್ರಕರಣ, ಲಾಟರಿ ಪ್ರಕರಣ, ಸಚಿವರಾದ ಕೆ.ಜೆ. ಜಾರ್ಜ್ ಅವರ ಮೇಲಿನ ಆರೋಪ, ಪರೇಶ್ ಮೇಸ್ತ ಪ್ರಕರಣಗಳನ್ನು ಸಿಬಿಐಗೆ ವಹಿಸಲಾಯಿತು. ಈ ಪ್ರಕರಣಗಳಲ್ಲಿ ಯಾರಿಗಾದರೂ ಶಿಕ್ಷೆಯಾಗಿದೆಯೇ ಎಂದು ಪ್ರಶ್ನಿಸಿದರು.
ಹಿಂದೆ ಬಿಜೆಪಿಯವರೇ ಸಿಬಿಐಯನ್ನು ಕರಪ್ಷನ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ. ದೇವೇಗೌಡರು ಚೋರ್ ಬಚಾವೋ ಸಂಸ್ಥೆ ಎಂದು ಹೇಳಿದ್ದರು. ಈಗ ಸಿಬಿಐ ಮೇಲೆ ವಿಶ್ವಾಸ ಬಂತಾ? ನನಗೆ ಸಿಬಿಐ ಮೇಲೆ ವಿಶ್ವಾಸವಿದೆ. ಆದರೆ, ನಮ್ಮ ಪೊಲೀಸರ ಬಗ್ಗೆ ನಂಬಿಕೆ ಇದೆ. ಅದಕ್ಕಾಗಿ ವಿಶೇಷ ತನಿಖಾ ತಂಡ ರಚನೆ ಮಾಡಿದ್ದೇವೆ ಎಂದು ವಿವರಿಸಿದರು.
ನಮ್ಮ ಸರ್ಕಾರ ಕಾನೂನು ರೀತ್ಯಾ ನಡೆಯುತ್ತಿರುವ ಕೆಲಸದಲ್ಲಾಗಲಿ, ತನಿಖೆಯಲ್ಲಾಗಲಿ ಮಧ್ಯಪ್ರವೇಶ ಮಾಡುವುದಿಲ್ಲ. ಅವರು ಸರಿಯಾದ ರೀತಿಯಲ್ಲಿ ಕೆಲಸ ಮಾಡುವ ನಂಬಿಕೆ ಇದೆ. ನಾನು ಯಾವತ್ತೂ ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡಿ ಎಂದು ಹೇಳಿಲ್ಲ. ಅಂತರರಾಷ್ಟ್ರೀಯ ಮಟ್ಟದ ತನಿಖೆಯ ಅಗತ್ಯವಿಲ್ಲ. ನಮ್ಮ ಪೊಲೀಸರ ಮೇಲೆ ನಂಬಿಕೆ ಇಟ್ಟಿರಬೇಕಲ್ಲ. ಎಲ್ಲ ಅಪರಾಧ ಪ್ರಕರಣಗಳ ತನಿಖೆ ಯಾರು ಮಾಡುತ್ತಾರೆ? ನಮ್ಮ ಪೊಲೀಸರಲ್ಲವೇ? ಅವರದ್ದೇ ವಿಶೇಷ ತನಿಖಾದಳ ರಚಿಸಿರುವುದಲ್ಲವೇ? ನಮ್ಮ ಪೊಲೀಸರನ್ನು ನಂಬಬೇಕಲ್ಲವೆ ಎಂದು ಪ್ರಶ್ನಿಸಿದರು.
ಈ ಪ್ರಕರಣದಲ್ಲಿ ನಾನಾಗಲಿ, ಡಿ.ಕೆ.ಶಿವಕುಮಾರ್ ಆಗಲಿ, ಯಾರೂ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ ಸಿಎಂ ನನಗೆ ಎಸ್.ಐ.ಟಿ. ಮೇಲೆ ವಿಶ್ವಾಸವಿದೆ. ಸತ್ಯಾಸತ್ಯತೆ ಹೊರಬರುವ ನಂಬಿಕೆ ಇದೆ ಎಂದು ತಿಳಿಸಿದರು.
ರೇವಣ್ಣ ಬಂಧನದಲ್ಲಿ ರಾಜಕೀಯ ಹಸ್ತಕ್ಷೇಪ ಇಲ್ಲ
ರೇವಣ್ಣ ಅವರ ಬಂಧನದಲ್ಲಿ ರಾಜಕೀಯ ಹಸ್ತಕ್ಷೇಪವಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು ಅವರ ಮೇಲಿನ ಆರೋಪದಲ್ಲಿ ಹುರುಳೇ ಇಲ್ಲದಿದ್ದರೆ ನಿರೀಕ್ಷಣಾ ಜಾಮೀನು ಕೋರಿದ್ದೇಕೆ? ನಿರೀಕ್ಷಣಾ ಜಾಮೀನು ಅರ್ಜಿ ಯಾಕೆ ತಿರಸ್ಕೃತವಾಯಿತು ಎಂದು ಪ್ರಶ್ನಿಸಿದರು.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…