ಮೈಸೂರು

ʼಕೈʼ ಯೋಜನೆಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ: ಹೆಚ್‌.ವಿ.ರಾಜೀವ್‌ !

ಮೈಸೂರು : ಕಾಂಗ್ರೆಸ್‌ ಪಕ್ಷ ರಾಜ್ಯಕ್ಕೆ ನೀಡಿರುವ ಯೋಜನೆಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಮಾಜಿ ಮುಡಾ ಅಧ್ಯಕ್ಷ ಹೆಚ್‌.ವಿ.ರಾಜೀವ್‌ ತಿಳಿಸಿದ್ದಾರೆ.

ಬಿಜೆಪಿ ಪಕ್ಷದಿಂದ ಹೊರ ಬಂದ ಬಳಿಕ, ಮಾ.೨೭ರಂದು ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷವನ್ನು ಸೇರ್ಪಡೆಯಾಗಲಿರುವ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಯಜನೆಗಳನ್ನು ಮೆಚ್ಚಿ ಕಾಂಗ್ರೆಸ್‌ ಪಕ್ಷವನ್ನು ಸೇರುತ್ತಿದ್ದೇನೆ ಎಂದು ತಿಳಿಸಿದರು.

ಕಾಂಗ್ರೆಸ್‌ ಪಕ್ಷ ನೀಡಿರುವ ಬಡವರ, ಮಹಿಳೆಯರ ಹಾಗೂ ಹಿಂದುಳಿದ- ಶೋಷಿತರ ಪರವಾದ ಯೋಜನೆಗಳಿಗೆ ಇನ್ನಷ್ಟು ಪುಷ್ಠಿ ನೀಡುವುದು ನನ್ನ ಆಸೆ ಎಂದರು.

ಅಷ್ಟೇ ಅಲ್ಲದೇ ತವರು ಜಿಲ್ಲೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ʼಕೈʼ ಬಲಪಡಿಸಬೇಕು. ಪಕ್ಷ ಸಂಘಟನೆಗಾಗಿ ಇನ್ನಷ್ಟು ದುಡಿಯುವ ಉದ್ದೇಶದಿಂದ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಎಂದು ಅಭಿಪ್ರಾಯ ತಿಳಿಸಿದರು.

ಈ ಬಾರಿ ಮೈಸೂರು -ಕೊಡಗು ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮಣ ಅವರ ಗೆಲುವಗಾಗಿ ಶ್ರಮ ಪಡುವುದಾಗಿ ತಿಳಿಸಿದರು.

ಬಿಎಸ್‌ವೈ ಪ್ರಶ್ನಾತೀತ ನಾಯಕ : ಬಿ.ಎಸ್‌.ಯಡೀಯೂರಪ್ಪ ಅವರು ಪಕ್ಷಾತೀತ ಹಾಗೂ ಪ್ರಶ್ನಾತೀತವಾದಂತ ನಾಯಕ.  ಯಾವುದೇ ಪಕ್ಷದವರಾದರೂ ಅವರನ್ನು ನಾಯಕರೆಂದು ಒಪ್ಪುತ್ತಾರೆ.

ನಾನು ಸದಾ ಗೌರವಿಸುವ ನಾಯಕರಲ್ಲಿ ಮುಂಚೂಣಿಯಲ್ಲಿ ನಿಂತಿದ್ದ, ನಿಂತಿರುವ ಹಾಗೂ ಸದಾ ನಿಲ್ಲುವ ನಾಯಕ ಯಡಿಯೂರಪ್ಪ ಎಂದು ತಿಳಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ರೈತರು ಬೆಳೆದ ಕಾಫಿ, ಅಡಿಕೆ, ಮೆಣಸು ಕಳ್ಳರ ಪಾಲು

ರಾತ್ರೋರಾತ್ರಿ ಬೆಳೆ ಕಳವು ಗಸ್ತು ಹೆಚ್ಚಳ ಸೇರಿದಂತೆ ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸಿದ್ದಾಪುರ: ವನ್ಯಜೀವಿಗಳ ಉಪಟಳ, ಹವಾಮಾನ ವೈಪರೀತ್ಯ,…

11 mins ago

ಸರಗೂರು ಸಾರಿಗೆ ಬಸ್‌ ನಿಲ್ದಾಣದಲ್ಲಿ ಅವ್ಯವಸ್ಥೆ

ದಾಸೇಗೌಡ  ಓವರ್‌ಹೆಡ್ ಟ್ಯಾಂಕ್‌ಗಳ ನಡುವೆ ತಪ್ಪಾದ ಸಂಪರ್ಕ; ಪೋಲಾಗುತ್ತಿರುವ ನೀರು; ಸಾರ್ವಜನಿಕರ ಆಕ್ರೋ ಸರಗೂರು : ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್…

2 hours ago

19 ಬೇಚರಾಕ್ ಹಳ್ಳಿಗಳು ಇನ್ಮುಂದೆ ಕಂದಾಯ ಗ್ರಾಮಗಳು

ಹುಣಸೂರು ತಾಲ್ಲೂಕಿನ ಜನರ ನಾಲ್ಕು ದಶಕಗಳ ಕನಸು ನನಸು; ಗ್ರಾಮಸ್ಥರು ಫುಲ್ ಖು ಹುಣಸೂರು: ತಾಲ್ಲೂಕಿನ ೧೯ ಬೇಚರಾಕ್ ಗ್ರಾಮಗಳನ್ನು…

2 hours ago

ಹೊಸ ವರ್ಷಕ್ಕೆ ಇಂದಿರಾ ಕಿಟ್

ಗಿರೀಶ್ ಹುಣಸೂರು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಪ್ರಯೋಜನ ಮೈಸೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಹೊಸ ವರ್ಷಾರಂಭದ ಜನವರಿ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ…

3 hours ago

ಪ್ರಧಾನಿ ವಿರುದ್ಧ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಯದುವೀರ್‌ ಆಗ್ರಹ

ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…

13 hours ago