ಮೈಸೂರು

ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ : ಸಿಎಂ

ಮೈಸೂರು : ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೈಸೂರು ದಸರಾಕ್ಕೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಲಿದ್ದಾರೆ. ದಸರಾದಲ್ಲಿ ಏರ್ ಶೋ, ದೀಪಾಲಂಕಾರ, ಡ್ರೋನ್ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜನಪ್ರಿಯವಾಗಿದೆ. ಜನರು ಸಂತಸದಿಂದ ಪಾಲ್ಗೊಳ್ಳುವುದೇ ದಸರಾ ಉತ್ಸವ. ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ, ವಸ್ತು ಪ್ರದರ್ಶನ ಪ್ರಾಧಿಕಾರ ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದಸರಾ ಪ್ರಾಧಿಕಾರದ ಅವಶ್ಯಕತೆ ಇಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

*ಕರ್ನಾಟಕ ಜಾತ್ಯಾತೀತ ರಾಜ್ಯ*
ದಸರಾ ಉದ್ಘಾಟಕರ ಬಗ್ಗೆ ಬಿಜೆಪಿಯವರು ವಿರೋಧದ ಧ್ವನಿಯೆತ್ತಿದ್ದರು. ಕರ್ನಾಟಕ ಜಾತ್ಯಾತೀತ ರಾಜ್ಯವಾಗಿದ್ದು, ಸಂವಿಧಾನದ ಬಗ್ಗೆ ಅರಿವಿಲ್ಲದವರೇ ಇಂತಹ ವಿರೋಧವನ್ನು ವ್ಯಕ್ತಪಡಿಸುತ್ತಾರೆ. ಆದ್ದರಿಂದ ಸುಪ್ರೀಂ ಕೋರ್ಟ್ ನಲ್ಲಿಯೂ ಕೂಡ ವಿರೋಧಕ್ಕೆ ಛೀಮಾರಿಯಾಯಿತು.ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದರು.

ಇದನ್ನು ಓದಿ :  ಮಂಡ್ಯ| ನಾಪತ್ತೆಯಾಗಿದ್ದ ಅಧಿಕಾರಿಯ ಶವ ಪತ್ತೆ

ದಸರಾ ಉದ್ಘಾಟನೆ ಬಗ್ಗೆ ಜನರ ಪ್ರತಿಕ್ರಿಯೆ ಹೇಗಿತ್ತು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ವರ್ಷಕ್ಕೊಮ್ಮೆ ನಡೆಯುವ ದಸರಾ ಉತ್ಸವದಲ್ಲಿ ಸಾರ್ವಜನಿಕರು, ವ್ಯಾಪಾರಸ್ಥರು ಸಂತೋಷದಿಂದ ಭಾಗವಹಿಸಿ ಸಂತಸ ವ್ಯಕ್ತಪಡಿಸಿದ್ದಾರೆ ಎಂದರು.

*ವಿರೋಧಪಕ್ಷಗಳು ಭವಿಷ್ಯಕಾರರಲ್ಲ*
ದಸರಾವೇಳೆಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡುವುದಿಲ್ಲ ಎಂದು ವಿಪಕ್ಷಗಳು ಭವಿಷ್ಯ ನುಡಿದಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿ, ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ. ಆದರೆ ಪಕ್ಷದ ವರಿಷ್ಠರ ಆದೇಶದಂತೆ ಎಲ್ಲರೂ ನಡೆಯಬೇಕಿದೆ. ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆ ಇದೆ. ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಲು , ಬಜೆಟ್ ಮಂಡಿಸಲು ಸಾಧ್ಯವಿಲ್ಲ ವೆಂದಿದ್ದರು. ಆದರೂ ನಾನೇ ಎರಡನೇ ಬಾರಿಗೂ ಮುಖ್ಯಮಂತ್ರಿಯಾಗಿ ಮುಂದುವರೆದು ಬಜೆಟ್ ಮಂಡಿಸಿದ್ದೇನೆ ಎಂದರು.

ಸರ್ಕಾರಿ ನೌಕರರ ತುಟ್ಟಿಭತ್ಯ ಬಾಕಿಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರಸರ್ಕಾರ ತುಟ್ಟಿಭತ್ಯೆ ನೀಡಿದ ನಂತರ ರಾಜ್ಯ ಸರ್ಕಾರವೂ ತನ್ನ ನೌಕರರಿಗೆ ತುಟ್ಟಿಭತ್ಯೆ ನೀಡುತ್ತದೆ ಎಂದರು.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

3 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

3 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

4 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

4 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

4 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

5 hours ago