ಮೈಸೂರು: ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ಒಂದೇ ರಾತ್ರಿಯಲ್ಲಿ ಮೇಕೆದಾಟು ಮಾಡೋಕೆ ಆಗುತ್ತಾ?. ಕರ್ನಾಟಕದ 4 ಜಲಾಶಯ ಕಟ್ಟೋಕೆ ಕೇಂದ್ರದಿಂದ ಹಣ ಕೊಟ್ಟಿಲ್ಲ. ಕರ್ನಾಟಕದ ಜಲಾಶಯವನ್ನು ಕರ್ನಾಟಕದವರೇ ಕಟ್ಟಿರೋದು. ಕಾವೇರಿ ನೀರು ವಿಚಾರವಾಗಿ ಸರ್ವಪಕ್ಷಗಳ ಸಭೆ ನಡೆಸುವುದನ್ನು ಬಿಟ್ಟು, ಸ್ಟಾಲಿನ್ ಹತ್ತಿರ ಹೋಗಿ ಚರ್ಚೆ ಮಾಡಿದ್ದೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ನಗರದ ಪತ್ರಕರ್ತರ ಭವನದಲ್ಲಿ ಭಾನುವಾರ(ಜು.28) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಮಿಳುನಾಡಿನವರು 1 ಟಿಎಂಸಿ ನೀರು ಕೇಳಿದ್ದರು. ಮಳೆಬಂದು ಹೆಚ್ಚು ನೀರು ಹೋಗ್ತಾ ಇದೆ.
ಈ ವಿಚಾರಕ್ಕೆ ಟೆಕ್ನಿಕಲ್ ಆಗಿ ಚರ್ಚೆ ಮಾಡಿದರೆ ಒಳ್ಳೆಯದು ಎಂದು ಹೇಳಿದರು.
ರಾಜ್ಯದ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತಳೆದಿದೆ ಎಂಬ ರಾಜ್ಯ ಸರ್ಕಾರದ ಆರೋಪಕ್ಕೆ ಎಚ್‌ಡಿ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದು, ನಾನು ಈ ಹಿಂದೆ ಸಿಎಂ ಆಗಿ, ಇದೀಗ ಕೇಂದ್ರ ಸಚಿವನಾಗಿ ಸ್ವಲ್ಪ ಅನುಭವ ಪಡೆದಿದ್ದೇನೆ. ನಾನು ಸಿಎಂ ಆಗಿದ್ದಾಗ ಕೊಡಗಿನಲ್ಲಿ ಭೀಕರ ಪ್ರವಾಹ ಬಂತು. ಆ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿತು. ಸ್ವತಃ ಪ್ರಧಾನಿಯವರೇ ಕರೆ ಮಾಡಿ ಮಾಹಿತಿ ಪಡೆದುಕೊಂಡರು. ಎಲ್ಲಾ ರೀತಿಯ ನೆರವು ನೀಡುವ ಭರವಸೆ ನೀಡಿದರು ಎಂದು ತಿರುಗೇಟು ನೀಡಿದರು.
ಕೇಂದ್ರದ ಜೊತೆ ಯಾವಾಗಲೂ ಗುದ್ದಾಡುವ ನೀವು ಅಂತಹ ವಾತಾವರಣವನ್ನೇಕೆ ಸೃಷ್ಟಿಸಿಕೊಂಡಿಲ್ಲ. ಎಲ್ಲದಕ್ಕೂ ಕೇಂದ್ರ ಸರ್ಕಾರವನ್ನು ಏಕೆ ದೂರುತ್ತೀರಿ?. ರಾಜ್ಯದ ಸಂಸದರ ಮೇಲೆ ಏಕೆ ಆರೋಪಗಳನ್ನು ಮಾಡುತ್ತೀರಿ?. ಹಾಗಾದರೆ ರಾಜ್ಯ ಸರ್ಕಾರದ ಕೆಲಸವಾದರೂ ಏನು? ನೀವು ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಕೇಂದ್ರದ ಮುಂದೆ ಸಮರ್ಥವಾಗಿ ಇಡಬೇಕು. ಅದು ಬಿಟ್ಟು ಎಲ್ಲದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡೋದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…