ಮೈಸೂರು

ಮೇಕೆದಾಟು ಯೋಜನೆಗೆ ಪ್ರಯತ್ನ ಮಾಡುತ್ತೇನೆ: ಎಚ್‌ಡಿ ಕುಮಾರಸ್ವಾಮಿ

ಮೈಸೂರು: ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ಒಂದೇ ರಾತ್ರಿಯಲ್ಲಿ ಮೇಕೆದಾಟು ಮಾಡೋಕೆ ಆಗುತ್ತಾ?. ಕರ್ನಾಟಕದ 4 ಜಲಾಶಯ ಕಟ್ಟೋಕೆ ಕೇಂದ್ರದಿಂದ ಹಣ ಕೊಟ್ಟಿಲ್ಲ. ಕರ್ನಾಟಕದ ಜಲಾಶಯವನ್ನು ಕರ್ನಾಟಕದವರೇ ಕಟ್ಟಿರೋದು. ಕಾವೇರಿ ನೀರು ವಿಚಾರವಾಗಿ ಸರ್ವಪಕ್ಷಗಳ ಸಭೆ ನಡೆಸುವುದನ್ನು ಬಿಟ್ಟು, ಸ್ಟಾಲಿನ್ ಹತ್ತಿರ ಹೋಗಿ ಚರ್ಚೆ ಮಾಡಿದ್ದೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ನಗರದ ಪತ್ರಕರ್ತರ ಭವನದಲ್ಲಿ ಭಾನುವಾರ(ಜು.28) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಮಿಳುನಾಡಿನವರು 1 ಟಿಎಂಸಿ ‌ನೀರು ಕೇಳಿದ್ದರು. ಮಳೆಬಂದು ಹೆಚ್ಚು ನೀರು ಹೋಗ್ತಾ ಇದೆ.
ಈ ವಿಚಾರಕ್ಕೆ ಟೆಕ್ನಿಕಲ್ ಆಗಿ ಚರ್ಚೆ ಮಾಡಿದರೆ ಒಳ್ಳೆಯದು ಎಂದು ಹೇಳಿದರು.

ರಾಜ್ಯದ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತಳೆದಿದೆ ಎಂಬ ರಾಜ್ಯ ಸರ್ಕಾರದ ಆರೋಪಕ್ಕೆ ‌ಎಚ್‌ಡಿ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದು, ನಾನು ಈ ಹಿಂದೆ ಸಿಎಂ ಆಗಿ, ಇದೀಗ ಕೇಂದ್ರ ಸಚಿವನಾಗಿ ಸ್ವಲ್ಪ ಅನುಭವ ಪಡೆದಿದ್ದೇನೆ. ನಾನು ಸಿಎಂ ಆಗಿದ್ದಾಗ ಕೊಡಗಿನಲ್ಲಿ ಭೀಕರ ಪ್ರವಾಹ ಬಂತು. ಆ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿತು‌. ಸ್ವತಃ ಪ್ರಧಾನಿಯವರೇ ಕರೆ ಮಾಡಿ ಮಾಹಿತಿ ಪಡೆದುಕೊಂಡರು. ಎಲ್ಲಾ ರೀತಿಯ ನೆರವು ನೀಡುವ ಭರವಸೆ ನೀಡಿದರು ಎಂದು ತಿರುಗೇಟು ನೀಡಿದರು.

ಕೇಂದ್ರದ ಜೊತೆ ಯಾವಾಗಲೂ ಗುದ್ದಾಡುವ ನೀವು ಅಂತಹ ವಾತಾವರಣವನ್ನೇಕೆ ಸೃಷ್ಟಿಸಿಕೊಂಡಿಲ್ಲ. ಎಲ್ಲದಕ್ಕೂ ಕೇಂದ್ರ ಸರ್ಕಾರವನ್ನು ಏಕೆ ದೂರುತ್ತೀರಿ?. ರಾಜ್ಯದ ಸಂಸದರ ಮೇಲೆ ಏಕೆ ಆರೋಪಗಳನ್ನು ಮಾಡುತ್ತೀರಿ?. ಹಾಗಾದರೆ ರಾಜ್ಯ ಸರ್ಕಾರದ ಕೆಲಸವಾದರೂ ಏನು? ನೀವು ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಕೇಂದ್ರದ ಮುಂದೆ ಸಮರ್ಥವಾಗಿ ಇಡಬೇಕು. ಅದು ಬಿಟ್ಟು ಎಲ್ಲದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡೋದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago