ಮೈಸೂರು : ಕುಮಾರಸ್ವಾಮಿ ಆರೋಪಗಳಿಗೆ, ಟೀಕೆಗಳಿಗೆ ಪ್ರತಿಕ್ರಿಯೆ ನೀಡೋದಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಡಿ.ಕೆ ಶಿವಕುಮಾರ್‌ಗೆ ಈಗ ಚನ್ನಪಟ್ಟಣ ನೆನಪಾಯಿತಾ ಎಂಬ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ ಕೆ ಸುರೇಶ್ ಸಂಸದರಾಗಿದ್ದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ತುಂಬಾ ಚೆನ್ನಾಗಿ ಅಭಿವೃದ್ಧಿ ಮಾಡಿದ್ದಾರೆ. ಚುನಾವಣೆ ಬಂದಾಗ ತಂತ್ರಗಾರಿಕೆ ಸಾಮಾನ್ಯ. ಉಪ ಚುನಾವಣೆಗೆ ತಂತ್ರಗಾರಿಕೆ ಮಾಡುತ್ತೇವೆ ಎಂದರು.
ಎಲ್ಲೆಲ್ಲಿ ಬೈ ಎಲೆಕ್ಷನ್ ನಡೆಯುತ್ತಿದೆಯೋ ಅಲ್ಲಿಗೆ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಅವರು ಕ್ಷೇತ್ರದ ಮತದಾರರ ಅಭಿಪ್ರಾಯ ಸಂಗ್ರಹ ಮಾಡುತ್ತಾರೆ. ಬೈ ಎಲೆಕ್ಷನ್ ಮೂರು ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಮೂರು ಕ್ಷೇತ್ರಗಳನ್ನೂ ಗೆಲ್ಲಲೇಬೇಕೆಂಬುದು ನಮ್ಮ ಗುರಿಯಾಗಿದೆ. ಗೆಲ್ಲುವ ಅಭ್ಯರ್ಥಿಗಳು ಯಾರು ಎಂಬುದು ಇಲ್ಲಿ ಮುಖ್ಯವಲ್ಲ. ಜನರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ ಎಂದು ತಿಳಿಸಿದರು.





