ಮೈಸೂರು : ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿವಿಧ ನಗರಗಳಲ್ಲಿ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗವುದು ಎಂದರು.
ಕಾಶ್ಮೀರದಲ್ಲಿ ಭದ್ರತೆ ಹೆಚ್ಚಿಸಬೇಕಿತ್ತು: ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು. ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು.
ಈ ಘಟನೆಯಲ್ಲಿ ಭದ್ರತಾ ವೈಫಲ್ಯವಾಗಿದೆ. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ ? ಕಾಶ್ಮೀರದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆಗೆ ಸಚಿವ ಸಂತೋಷ್ ಲಾಡ್ ಅವರನ್ನು ನಿಯೋಜಿಸಿದ್ದು, ಅವರು ಎಲ್ಲ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತಂದಿದ್ದಾರೆ ಎಂದರು.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…