ಮೈಸೂರು

ಟಿಕೆಟ್‌ ನೀಡಿದರೆ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡುತ್ತೇನೆ: ಹಳ್ಳಿ ಹಕ್ಕಿ

ಮೈಸೂರು: ತೀವ್ರ ಕುತೂಹಲಕ್ಕೆ ದಾರಿ ಮಡಿಕೊಟ್ಟಿದ್ದ ಮೈಸೂರು ಲೋಕಸಭಾ ಬಿಜೆಪಿ ಟಿಕೆಟ್‌ ರಾಜವಂಶಸ್ಥ ಯದುವೀರ್‌ ಅವರ ಪಾಲಾದ ನಂತರ ಇದೀಗ ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಹುಟುಕಾಟ ಶುರುವಾಗಿದೆ.

ರಾಜರ ವಿರುದ್ಧ ಯಾರನ್ನು ನಿಲ್ಲಿಸಬೇಕೆಂಬುದು ಸದ್ಯ ತಲೆನೋವಾಗಿ ಪರಿಣಮಿಸಿದೆ. ಇದರ ಜೊತೆಗೆ ಕಾಂಗ್ರೆಸ್‌ ನಿಂದ ಟಿಕೆಟ್‌ ನೀಡಿದರೆ ನಾನು ಸ್ಪರ್ಧೆ ಮಾಡುತ್ತೇನೆ ಎಂದು ವಿಧಾನಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಹೇಳಿದ್ದಾರೆ.

ನಾನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ. ಕಾಂಗ್ರೆಸ್‌ನಿಂದ ಟಿಕೆಟ್​ಗೆ ಬೇಡಿಕೆ ಇಟ್ಟಿದ್ದೇನೆ, ಈ ಬಗ್ಗೆ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ‌ ಮಾತನಾಡಿರುವುದಾಗಿ ಅವರು ಹೇಳಿದರು.

ಸಿದ್ದರಾಮಯ್ಯ ನೀವು ಬಿಜೆಪಿಯಲ್ಲಿ ಇದ್ದೀರಾ ಹೇಗೆ ಅಂತಾ ಕೇಳಿದರು. ಅದಕ್ಕೆ ನಾನು ಎಲ್ಲವನ್ನೂ ವಿವರಿಸಿದ್ದೇನೆ. ನಾನು ಟೆಕ್ನಿಕಲಿ ಬಿಜೆಪಿಯಲ್ಲಿದ್ದೇನೆ. ನನಗೆ ಟಿಕೆಟ್ ನೀಡಿದರೆ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದೇನೆ. ಅದಕ್ಕೆ ಸಿಎಂ ಸಿದ್ದರಾಮಯ್ಯ ನೋಡೋಣ ಅಂತಾ ಹೇಳಿದ್ದಾರೆ.

ನಾನು ಮೈಸೂರು-ಕೊಡಗು ಕ್ಷೇತ್ರದ ಸಂಸದನಾಗಿದ್ದ ವೇಳೆ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಹಿಂದೆ ಸಚಿವನಾಗಿದ್ದಾಗ ಬಿಸಿಯೂಟ ಯಶಸ್ವಿನಿ ಯೋಜನೆ ಜಾರಿ ಮಾಡಿದ್ದೇನೆ. ಚುನಾವಣೆಗೆ ಹಣ ಜಾತಿಯಿಂದ ಮಾತ್ರವಲ್ಲ ಅನುಭವದ ಅವಶ್ಯಕತೆ ಇದೆ ಎಂದರು. ಇದೇ ವೇಳೆ ಕಾಂಗ್ರೆಸ್‌ ಟಿಕೆಟ್‌ ನೀಡಿದರೇ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಎಚ್‌. ವಿಶ್ವನಾಥ್‌ ವಿವರಿಸಿದರು.

andolanait

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

1 hour ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

3 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

3 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

3 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

3 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

4 hours ago