ಹುಬ್ಬಳ್ಳಿ : ಯಾರೇ ಮಾಡಿದ್ದರು ಇದು ಕ್ಷಮಿಸಲಾರದ ಅಪರಾದ ಎಂದು ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಪ್ರತಿಕ್ರಿಯೆ ನೀಡಿದರು.
ಹುಬ್ಬಳ್ಳಿಯಲ್ಲಿ ಇಂದು ನಡೆಯಲಿರುವ ಕೋರ್‌ಕಮಿಟಿ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ ವೇಲೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ವ್ಯಕ್ತಿಯಾಗಲಿ ತಪ್ಪು ಮಾಡಿದರೆ ವಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.
ಸರ್ಕಾರ ಎಸ್‌ಐಟಿ ರಚನೆಯಾಗಿದೆ ತನಿಖೆ ಮಾಡಿ ತಪ್ಪಿತಸ್ತರಿಗೆ ಶಿಕ್ಷೆ ನೀಡಲಿ. ಆದರೆ ಈ ಘಟನೆಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವವರ ವಿರುದ್ಧ ಹಾಗೂ ಈ ವೀಡಿಯೋ ಇರುವ ಪೆಂಡ್ರೈವ್ ಹಂಚಿ ಹೆಣ್ಣುಮಕ್ಕಳಿಗೆ ಅವಮಾನ ಮಾಡಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದರು.
ಇದು ಕ್ಷಮಿಸಲಾರದ ಅಪರಾಧ. ಇದರ ಬಗ್ಗೆ ಮಾತನಾಡುವುದು ಅಸಹ್ಯ. ಆದರೇ ಅದು ಸಾಭೀತು ಆಗಬೇಕು. ತಪ್ಪು ಮಾಡಿದವರು ಹಾಗೂ ಅದನ್ನು ಹಂಚುವ ಮೂಲಕ ಹೆಣ್ಣುಮಕ್ಕಳನ್ನು ಬೀದಿಗೆ ತಂದವರ ವಿರುದ್ಧವೂ ಕ್ರಮವಾಗುವ ಕುರಿತಂತೆ ಎಲ್ಲಾ ವಿಚಾರಗಳ ಬಗ್ಗೆ ಇಂದು ಕರೆದಿರುವ ಕೋರ್‌ಕಮಿಟಿ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದರು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…