ಮೈಸೂರು

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ ವಾರ್ನಿಂಗ್ ನೀಡಲಾಗಿದೆ. ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ಈ ರೀತಿಯಲ್ಲಿ ಡಂಗುರ ಭಾರಿಸಿ ಎಚ್ಚರಿಕೆ ನೀಡಲಾಗಿದೆ.

ಗ್ರಾಮ ದೇವತೆ ಜಾತ್ರೆ ವೇಳೆ ಯಾವುದೇ ರೀತಿಯ ವಿಡಿಯೋ ಮಾಡಿದ್ರೆ ದಂಡ ಫಿಕ್ಸ್ ಮಾಡಿ ಯಜಮಾನರುಗಳು ಫಾರ್ಮಾನು ಹೊರಡಿಸಿದ್ದಾರೆ. ಮಂಗಳವಾರದಿಂದ (ಫೆ10) ಮೂರು ದಿನಗಳ ಕಾಲ ಗೋಳೂರು ಗ್ರಾಮದಲ್ಲಿ ಗ್ರಾಮ ದೇವತೆ ಜಾತ್ರೆ, ಅಲ್ಲಿ ಹೆಣ್ಣು ಮಕ್ಕಳ ವಿಡಿಯೋ ತೆಗೆಯುವುದು ಅಥವಾ ಕುಡಿದು ಗಲಾಟೆ ಮಾಡುವ ವಿಚಾರದಲ್ಲಿ ನಿರ್ಬಂಧ ವಿಧಿಸಿ ಗ್ರಾಮದ ನಿವಾಸಿ ಚಕ್ರಜವರ ಎಂಬುವರ ಮೂಲಕ ತಮಟೆ ಭಾರಿಸಿ ಗ್ರಾಮದಲ್ಲಿ ಡಂಗುರ ಸಾರಿಸಿದ್ದಾರೆ.

30 ದಿನಗಳವರೆಗೆ ಗ್ರಾಮದಲ್ಲಿ ಮಾಂಸಾಹಾರಿ ಊಟ ಹಾಗೂ ಒಗ್ಗರಣೆ ನಿಷೇಧ..!
ಸಾಕಷ್ಟು ವರ್ಷಗಳಿಂದಲೂ ಗ್ರಾಮ ದೇವತೆ ಮಾರಮ್ಮ ಹಬ್ಬವನ್ನು ಗ್ರಾಮದಲ್ಲಿ ಕಟ್ಟುನಿಟ್ಟಾಗಿ ಆಚರಿಸಲಾಗುತ್ತಿದೆ. ಹಬ್ಬ ಒಂದು ತಿಂಗಳು ಬಾಕಿ ಇರುವಾಗಲೇ ಗ್ರಾಮದ ಯಾವುದೇ ಜನಾಂಗದ ಬೀದಿಯ ಮನೆಗಳಲ್ಲಿ ಒಗ್ಗರಣೆ ಹಾಕುವಂತಿಲ್ಲ. ಮಾಂಸಾಹಾರಿ ಊಟವನ್ನು ಸೇವಿಸುವಂತಿಲ್ಲ ಇದು ತಾತ ಮುತ್ತಾತರ ಕಾಲದಿಂದಲೂ ನಡೆದು ಬಂದಿರುವ ಸಾಂಪ್ರದಾಯವಾಗಿದೆ ಎನ್ನುತ್ತಾರೆ ಗ್ರಾಮದ ಯಜಮಾನ ಮುದ್ದು ಮಾದಶೆಟ್ಟಿ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

3 mins ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

12 mins ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

15 mins ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

17 mins ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

23 mins ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

1 hour ago