Mysore
17
scattered clouds

Social Media

ಬುಧವಾರ, 17 ಡಿಸೆಂಬರ್ 2025
Light
Dark

ಪೂರ್ವಜರಂತೆ ಪ್ರಜೆಗಳಿಗಾಗಿ ಶ್ರಮಿಸುವೆ: ಯದುವೀರ್‌

ಮೈಸೂರು: ನನ್ನ ಪೂರ್ವಜರಂತೆ ನಾನು ಕೂಡ ಪ್ರಜೆಗಳ ಶ್ರೇಯೋಭಿವೃದ್ಧಿಗೆ ಶ್ರಮಿಸುವ ಸಂಕಲ್ಪ ಮಾಡಿದ್ದೇನೆ ಎಂದು ಮೈಸೂರು ಕೊಡಗು ಕ್ಷೇತ್ರದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಹೇಳಿದರು.

ಭಾನುವಾರ ಮಹಾರಾಜ ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್‌ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಗೆ ಜನರ ಮಧ್ಯೆ ಇದ್ದು ಗೊತ್ತಿಲ್ಲ ಎಂಬ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ಪರೋಕ್ಷವಾಗಿ ತೀರುಗೇಟು ನೀಡಿದರು.

ನನ್ನ ಪೂರ್ವಿಕರು ಅರಮನೆಯಲ್ಲಿ ಆಡಳಿತ ನಡೆಸುತ್ತಿದ್ದಾಗ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದರು. ನಾನು ಅರಮನೆಯಲ್ಲಿ ಹುಟ್ಟಿದರು ಪ್ರಜಾಸತ್ತಾತ್ಮಕ ಚೌಕಟ್ಟಿನಲ್ಲಿ ಜನರ ಮಧ್ಯೆಯೇ ಬೆಳೆದಿದ್ದೇನೆ. ಚಾಮುಂಡೇಶ್ವರಿ ರಥವನ್ನು ಮೈಸೂರಿನ ಒಡೆಯರ್‌ಗಳು ಎಳೆದಂತೆ, ಈಗ ದೇಶದ ರಥವನ್ನು ಪ್ರಧಾನಿ ಮೋದಿಯವರೊಂದಿಗೆ ಭಾರತ ಮಾತೆಯ ರಥವನ್ನು ಮುನ್ನಡೆಸುತ್ತೇನೆ ಎಂದು ಹೇಳಿದರು.

ನರೇಂದ್ರ ಮೋದಿಯವರು ಭಾರತೀಯ ಮೂಲದ ಯೋಗವನ್ನು ಜಗತ್ತಿಗೆ ಪರಿಚಯಿಸಿದ ಫಲವಾಗಿ ಇಂದು ಯೋಗ ಅಂತರಾಷ್ಟ್ರೀಯ ಮನ್ನಣೆ ಗಳಿಸಿದೆ. ಈ ನಿಟ್ಟಿ ಮೋದಿಯವರು ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಕಾಪಾಡಿದ್ದಾರೆ ಎಂದು ಪ್ರತಿಪಾದಿಸಿದರು.

Tags:
error: Content is protected !!