ಮೈಸೂರು: ನನ್ನ ಪೂರ್ವಜರಂತೆ ನಾನು ಕೂಡ ಪ್ರಜೆಗಳ ಶ್ರೇಯೋಭಿವೃದ್ಧಿಗೆ ಶ್ರಮಿಸುವ ಸಂಕಲ್ಪ ಮಾಡಿದ್ದೇನೆ ಎಂದು ಮೈಸೂರು ಕೊಡಗು ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಹೇಳಿದರು.
ಭಾನುವಾರ ಮಹಾರಾಜ ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಗೆ ಜನರ ಮಧ್ಯೆ ಇದ್ದು ಗೊತ್ತಿಲ್ಲ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪರೋಕ್ಷವಾಗಿ ತೀರುಗೇಟು ನೀಡಿದರು.
ನನ್ನ ಪೂರ್ವಿಕರು ಅರಮನೆಯಲ್ಲಿ ಆಡಳಿತ ನಡೆಸುತ್ತಿದ್ದಾಗ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದರು. ನಾನು ಅರಮನೆಯಲ್ಲಿ ಹುಟ್ಟಿದರು ಪ್ರಜಾಸತ್ತಾತ್ಮಕ ಚೌಕಟ್ಟಿನಲ್ಲಿ ಜನರ ಮಧ್ಯೆಯೇ ಬೆಳೆದಿದ್ದೇನೆ. ಚಾಮುಂಡೇಶ್ವರಿ ರಥವನ್ನು ಮೈಸೂರಿನ ಒಡೆಯರ್‌ಗಳು ಎಳೆದಂತೆ, ಈಗ ದೇಶದ ರಥವನ್ನು ಪ್ರಧಾನಿ ಮೋದಿಯವರೊಂದಿಗೆ ಭಾರತ ಮಾತೆಯ ರಥವನ್ನು ಮುನ್ನಡೆಸುತ್ತೇನೆ ಎಂದು ಹೇಳಿದರು.
ನರೇಂದ್ರ ಮೋದಿಯವರು ಭಾರತೀಯ ಮೂಲದ ಯೋಗವನ್ನು ಜಗತ್ತಿಗೆ ಪರಿಚಯಿಸಿದ ಫಲವಾಗಿ ಇಂದು ಯೋಗ ಅಂತರಾಷ್ಟ್ರೀಯ ಮನ್ನಣೆ ಗಳಿಸಿದೆ. ಈ ನಿಟ್ಟಿ ಮೋದಿಯವರು ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಕಾಪಾಡಿದ್ದಾರೆ ಎಂದು ಪ್ರತಿಪಾದಿಸಿದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…