ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ) ಜಾಗೃತ ದಳದ ಅಧಿಕಾರಿಗಳು 31 ಪ್ರಕರಣಗಳನ್ನು ದಾಖಲಿಸಿ, 2.17 ಲಕ್ಷ ರೂ.ಗಳ ದಂಡ ವಿಧಿಸಿದ್ದಾರೆ.
ಸೆಸ್ಕ್ ವ್ಯಾಪ್ತಿಯಲ್ಲು ಸಾಮೂಹಿಕ ಕಾರ್ಯಾಚರಣೆ ನಡೆಸಿದ ಸೆಸ್ಕ್ ಜಾಗೃತದಳ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿ, ಅನಧಿಕೃತವಾಗಿ ವಿದ್ಯುತ್ ಸಂಪರ್ಕವನ್ನು ಪಡೆಯುವ ಮೂಲಕ ನಿಗಮಕ್ಕೆ ನಷ್ಟ ಉಂಟುಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಸೆಸ್ಕ್ ವ್ಯಾಪ್ತಿಯ ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳ ಜಾಗೃತದಳದ ವ್ಯಾಪ್ತಿಯ ಅಧಿಕಾರಿ ಮತ್ತು ಸಿಬ್ಬಂದಿ 8 ತಂಡಗಳಾಗಿ, ಮೈಸೂರು ಜಿಲ್ಲೆ ವ್ಯಾಪ್ತಿಯಲ್ಲಿರುವ ಏಕಲವ್ಯನಗರ, ಬಂಬೂಬಜಾರ್, ಇಟ್ಟಿಗೆಗೂಡು ಹಾಗೂ ಇತರೆ ವ್ಯಾಪ್ತಿಯಲ್ಲಿರುವ ವಿವಿಧ ಸ್ಥಾವರಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದರು.
ಇದನ್ನೂ ಓದಿ:-ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ : ಸಮಿತಿ ರಚನೆ
ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು, ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್, ಮುಖ್ಯ ಪ್ರಧಾನ ವ್ಯವಸ್ಥಾಪಕರು (ತಾಂತ್ರಿಕ) ಶರಣಮ್ಮ ಎಸ್. ಜಂಗಿನ್, ಸೆಸ್ಕ್ ಜಾಗೃತ ದಳದ ಎಸ್ಪಿ ಸವಿತಾ ಹೂಗಾರ್ ಅವರುಗಳ ಮಾರ್ಗದರ್ಶನದಲ್ಲಿ ಸದರಿ ಕಾರ್ಯಾಚರಣೆ ನಡೆಯಿತು.
ಕಾರ್ಯಾಚರಣೆಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಬಿ.ಎಸ್. ಚಂದ್ರಶೇಖರ್, ಪೋಲೀಸ್ ಉಪಾಧೀಕ್ಷಕಿ ಎಂ.ಜೆ.ಪೃಥ್ವಿ, ಸೆಸ್ಕ್ ಜಾಗೃತದಳದ ಪೊಲೀಸ್ ನಿರೀಕ್ಷಕಿ ಎಂ. ಜಯರತ್ನ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಸೈಯದಾ ಕೌಸರ್ ಬೇಗಂ ಇತರರು ಪಾಲ್ಗೊಂಡಿದ್ದರು.
ಬೆಂಗಳೂರು: ಪೈರಸಿ ವಿರುದ್ಧ ನವರಸ ನಾಯಕ ಜಗ್ಗೇಶ್ ಸಮರ ಸಾರಿದ್ದು, ಕೋಣ ಸಿನಿಯಾ ಪೈರಸಿ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಹೊಸ ವರ್ಷ ಆಚರಣೆಗೆ ಸರ್ವ ರೀತಿಯಲ್ಲೂ ಸಜ್ಜಾಗಿದ್ದು, ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಪ್ರಮುಖವಾಗಿ…
ಕೇರಳ(ತಿರುವನಂತಪುರ): ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ…
ಮೈಸೂರು: ದೇಶದೊಳಗೆ ಅಕ್ರಮವಾಗಿ ನುಸುಳುವವರ ಸಂಖ್ಯೆ ಹೆಚ್ಚಾಗಿದ್ದು, ಕರ್ನಾಟಕದಲ್ಲಿಯೂ ಬಾಂಗ್ಲಾದೇಶದ ಪ್ರಜೆಗಳು ಉದ್ಧಟತನ ತೋರುತ್ತಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ…
ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ…
ಮೈಸೂರು: ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ತಡೆಯಲು…