ಶ್ರೀಧರ್ ಆರ್. ಭಟ್
ನಂಜನಗೂಡು: ಯುಗಾದಿ ಹಬ್ಬದ ದಿನ ಅನಧಿಕೃತವಾಗಿ ಮಾರಾಟ ಮಾಡುತ್ತಿದ್ದ ಮದ್ಯ ಸೇವಿಸಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಬಂಡೀಪುರ ರಕ್ಷಿತಾರಣ್ಯದ ಅಂಚಿನಲ್ಲಿರುವ ನಾಗಣಾಪುರ ಕಾಲೋನಿಯಲ್ಲಿ ನಡೆದಿದೆ.
ನಾಗಣಾಪುರ ಆದಿವಾಸಿ ಕಾಲೋನಿಯ 54 ವರ್ಷದ ರಾಜು ಎಂಬಾತನೇ ಅಕ್ರಮ ಮದ್ಯ ಸೇವಿಸಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. ತಾಲ್ಲೂಕಿನಾದ್ಯಂತ ಪೆಟ್ಟಿ ಮತ್ತು ಗಿರಣಿ ಅಂಗಡಿಗಳಲ್ಲಿ ಅನಧಿಕೃತವಾಗಿ ಮಾರಾಟವಾಗುವ ಮದ್ಯ ಸೇವಿಸಿ ಬಲಿಯಾದ ಮೂರನೆಯ ವ್ಯಕ್ತಿ ಈತನಾಗಿದ್ದಾನೆ.
ಕಳೆದ 20 ದಿನಗಳ ಹಿಂದೆ ಇದೇ ಕಾಡಂಚಿನ ಕಾಲೋನಿಯ ಈರೇಗೌಡನ ಹುಂಡಿ ಗ್ರಾಮದ ಚೆನ್ನಪ್ಪ ಹಾಗೂ ಬಳ್ಳೂರು ಹುಂಡಿ ಗ್ರಾಮದ ಮಹದೇವ ಎಂಬುವವರು ಅಕ್ರಮ ಮದ್ಯ ಸೇವಿಸಿ ಬಲಿಯಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಈಗ ಮೂರನೇ ಬಲಿಯಾಗಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಜನಪ್ರತಿನಿಧಿಗಳು ಮತ್ತು ಅಬಕಾರಿ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಗ್ರಾಮೀಣ ಪ್ರದೇಶದ ಪೆಟ್ಟಿ ಮತ್ತು ಗಿರಣಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದು, ಈ ಬಗ್ಗೆ ಏನೂ ಕ್ರಮ ಕೈಗೊಳ್ಳದೇ ಅಧಿಕಾರಿಗಳು ಜಾಣ ಮೌನ ವಹಿಸಿರುವುದು ಅನೇಕ ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…